ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟ; ಬೆಳಗಾವಿಯಲ್ಲಿ ಬಿಜೆಪಿ ಅಧಿಕಾರಕ್ಕೆ; ಹುಬ್ಬಳ್ಳಿ-ಧಾರವಾಡ, ಕಲಬುರಗಿ ಅತಂತ್ರ

Source: VB | By I.G. Bhatkali | Published on 7th September 2021, 1:42 PM | State News |

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿದ್ದ ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ್ದರೆ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಅತಂತ್ರವಾಗಿವೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿದ್ದು, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅತಂತ್ರ ಫಲಿತಾಂಶ ಬಂದಿದೆ. ಎರಡು ಮಹಾನಗರ ಪಾಲಿಕೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಗಳಿಗೆ ಅದೃಷ್ಟ ಖುಲಾಯಿಸಲಿದೆ.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳಲ್ಲಿ ಬಿಜೆಪಿ-35, ಕಾಂಗ್ರೆಸ್-10 ಹಾಗೂ ಇತರ-13 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಗದ್ದುಗೆ ಏರಿದೆ. ಗಡಿ ಜಿಲ್ಲೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಹಳ ವರ್ಷಗಳಿಂದ ಅಧಿಕಾರ ಹಿಡಿದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಅಸದುದ್ದೀನ್ ಉವೈಸಿ ನೇತೃತ್ವದ ಎಐಎಂಐಎಂ ಅಭ್ಯರ್ಥಿ ಶಾಯಿ ಖಾನ್ ಪಠಾಣ್ (ವಾರ್ಡ್ ನಂ.18) ಗೆಲುವು ಸಾಧಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪಟ್ಟು 82 ವಾರ್ಡ್‌ಗಳ ಪೈಕಿ ಬಿಜೆಪಿ-39, ಕಾಂಗ್ರೆಸ್-33, ಎಐಎಂಐಎಂ-3, ಜೆಡಿಎಸ್‌-1 ಹಾಗೂ ಪಕ್ಷೇತರರು 6 ಮಂದಿ ಆಯ್ಕೆಯಾಗಿದ್ದು, ಅತಂತ್ರ ಫಲಿತಾಂಶ ಬಂದಿದೆ. ಸ್ಪಷ್ಟ ಬಹುಮತಕ್ಕೆ 42 ಸ್ಥಾನಗಳ ಅಗತ್ಯವಿದ್ದು, ಪಕ್ಷೇತರರ ಬೆಂಬಲದೊಂದಿಗೆ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆಗಳಿವೆ. ಅತ್ತ ಕಲಬುರಗಿ ಮಹಾನಗರ ಪಾಲಿಕೆಯ ಒಟ್ಟು 55 ವಾರ್ಡ್‌ಗಳ ಪೈಕಿ ಬಿಜೆಪಿ-23, ಕಾಂಗ್ರೆಸ್-27, ಜೆಡಿಎಸ್‌-4 ಹಾಗೂ ಪಕ್ಷೇತರರು 1 ಸ್ಥಾನ ಗಳಿಸಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸ್ಪಷ್ಟ ಬಹುಮತಕ್ಕೆ 28 ಸ್ಥಾನಗಳು ಬರಬೇಕು. ಪಕ್ಷೇತರ ಅಭ್ಯರ್ಥಿ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ನಿಶ್ಚಿತವಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...