ಉಪಚುನಾವಣೆ ಫಲಿತಾಂಶ: 12 ಕ್ಷೇತ್ರಗಳಲ್ಲಿ ಅರಳಿದ ಕಮಲ- ಬಿಎಸ್'ವೈ ಸರ್ಕಾರ ಸೇಫ್, ಜೆಡಿಎಸ್ 'ಭದ್ರಕೋಟೆ' ಛಿದ್ರ

Source: so news | By Staff Correspondent | Published on 10th December 2019, 12:10 AM | State News | Don't Miss |

 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ಗೆಲುವು ಸಾಧಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ವೈ.ಘೋರ್ಪಡೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು, ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಹಾಗೂ ಜೆಡಿಎಸ್ ಅಭ್ಯರ್ಥಿ ಕಾಂತರಾಜು ವಿರುದ್ಧ ಗೆಲವು ಸಾಧಿಸಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಜೆಡಿಎಸ್ ಅಭ್ಯರ್ಥಿ ದೇವರಾಜ್ ಬಿಎಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಯವರು ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ.ಮಂಗ್ಸೂಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ.ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್'ಟಿ. ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. ಶಿವಾಜಿನಗರ ಹಾಗೂ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ರಿಜ್ವಾನ್ ಅರ್ಷದ್ ಹಾಗೂ ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದಾರೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...