ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಯೋಜನೆಗಳ ತೀರ್ಮಾನ; ಸಿದ್ದರಾಮಯ್ಯ

Source: Vb | By I.G. Bhatkali | Published on 1st June 2023, 11:34 AM | State News |

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಜೂ.2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದರು.

ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತೀರ್ಮಾನ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಸಂಗ್ರಹ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಸಚಿವರು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...