ಬೆಂಗಳೂರು: ಮತೀಯ ಗೂಂಡಾಗಿರಿಗೆ ಸಮರ್ಥನೆ ಆರೋಪ ಸಿಎಂ ಬೊಮ್ಮಾಯಿಗೆ ನೋಟಿಸ್

Source: VB | By I.G. Bhatkali | Published on 19th October 2021, 5:10 PM | State News | National News |

ಬೆಂಗಳೂರು: ಮತೀಯ ಗೂಂಡಾಗಿರಿ ಕುರಿತು ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ ಎಂದು ಸಮರ್ಥಿಸಿಕೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಮಾಡಿದ ಪ್ರಮಾಣಕ್ಕೆ ವಿರುದ್ಧವಾಗಿದೆ, ಇದು ಸಂವಿಧಾನದ ಉಲ್ಲಂಘನೆಯಾಗಿದೆ ಹಾಗೂ ಸರ್ವೋಚ್ಚ ನ್ಯಾಯಾಲಯ ಅಂತರ್‌ಜಾತಿ ಹಾಗೂ ಅಂತರ್‌ಧರ್ಮ ವಿವಾಹಗೊಂಡವರ ರಕ್ಷಣೆಯ ಬಗ್ಗೆ ನೀಡಿದ ತೀರ್ಪುಗಳ ಸ್ವ ಉಲ್ಲಂಘನೆಯಾಗಿದೆ. ಹೀಗಾಗಿ, ನೋಟಿಸ್ ನೀಡಲಾಗಿದೆ.

ನೋಟಿಸ್ ಮೂಲಕ ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು, ಅದಕ್ಕೆ ಕ್ಷಮೆಯಾಚಿಸಬೇಕು ಹಾಗೂ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯವು ಶಕ್ತಿವಾಹಿನಿ ಹಾಗೂ ತೆನ್ ಪೂನಾವಾಲ ಪ್ರಕರಣಗಳಲ್ಲಿ ನೀಡಿದ ತೀರ್ಪುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದೆ.

ಸಿಎಂ ಹೇಳಿಕೆ ಏನು: ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ ಎಂಬ ಹೇಳಿಕೆಯನ್ನು ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ನೀಡಿದ್ದರು. ಸಾಮಾಜಿಕ ಸಾಮರಸ್ಯ ಕಾಪಾಡಲು ನಾವೆಲ್ಲರೂ ಪ್ರಯತ್ನ ಪಡಬೇಕು. ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಪ್ರತಿಯೊಬ್ಬರ ಹೊಣೆಗಾರಿಕೆಯೂ ಇದೆ ಎಂದಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...