ಜಾತಿ ದೌರ್ಜನ್ಯ, ಕೊಲೆ ಪ್ರಕರಣ; ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ: ಸಿಎಂ

Source: Vb | By I.G. Bhatkali | Published on 8th September 2023, 10:20 AM | State News |

ಬೆಂಗಳೂರು: ಜಾತಿ ದೌರ್ಜನ್ಯ, ಕೊಲೆ ಪ್ರಕರಣಗಳಲ್ಲಿ ಗಂಭೀರ ಕಾನೂನು ಕ್ರಮ ಜರುಗಿಸದೆ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ, ಎಸ್ಪಿ, ಡಿವೈಎಸ್ಪಿಗಳನ್ನೂ ಹೊಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಮೂರನೇ ಮಹಡಿ ಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ-ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, 'ಅನೇಕ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ. ಹೀಗೇ, ಮುಂದುವರಿದರೆ ಎಸ್ಪಿ, ಡಿವೈಎಸ್ಪಿಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

ತಾಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್ ಶೀಟ್ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. 

ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತೀ ಪ್ರಕರಣ ದಾಖ ಲಿಸುವಾಗಪೊಲೀಸರುತಮ್ಮ ವಿವೇ ಚನೆಯನ್ನು ಬಳಸಬೇಕು. ಚಾರ್ಜ್ ಶೀಟ್ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿ ಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಆರ್.ಬಿ. ತಿಮ್ಮಾಪೂರ, ಕೆ.ಎನ್.ರಾಜಣ್ಣ ನಾಗೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಪ್ರಮುಖರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...