ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚಿ; ಸಿಎಂ ಸೂಚನೆ; ಕಮಿಷನರೇಟ್/ ಪ್ರಧಾನ ಕಚೇರಿಯಲ್ಲೇ ಫ್ಯಾಕ್ಟ್‌ಚೆಕ್

Source: Vb | By I.G. Bhatkali | Published on 21st June 2023, 10:32 AM | State News |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ(ಫೇಕ್‌ ನ್ಯೂಸ್) ಹಾವಳಿ ಮಿತಿ ಮೀರಿದೆ. ಈ ಫೇಕ್ ನ್ಯೂಸ್‌ಗಳ ಮೂಲ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿ ಸುವಂತೆ ಸಿಎಂಸಿದ್ದರಾಮಯ್ಯ ಅಧಿಕಾರಿಗ ಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮಂಗಳವಾರ ತನ್ನನ್ನು ಭೇಟಿಯಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ ಸಿದ್ದರಾಮಯ್ಯ, 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜ ಕೀಯ ವಿರೋಧಿಗಳು ಅನುಸರಿಸುತ್ತಿ ದ್ದಾರೆ ಎಂದರು.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲಿ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

'ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೇ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದರೆ, ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಕಮಿಷನರೇಟ್/ಪ್ರಧಾನ ಕಚೇರಿಯಲ್ಲೇ ಫ್ಯಾಕ್ಟ್‌ಚೆಕ್: ಈ ಹಿಂದೆ ಬೆಂಗಳೂರು ನಗರ ಪೊಲೀಸ್‌ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಶಿಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ ಚೆಕ್ (ಸತ್ಯಾಸತ್ಯತೆ ಪರಿಶೀಲನೆ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವ ಸನ್ನದ್ಧವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...