ಸೋಮವಾರದಿಂದ ಅನ್ ಲಾಕ್ ಸಂಜೆವರೆಗೆ ಅಂಗಡಿ-ಮುಗ್ಗಟ್ಟು ಓಪನ್​: ಮಾಲ್​​, ದೇವಸ್ಥಾನಕ್ಕಿಲ್ಲ ಅವಕಾಶ

Source: news 18 | By MV Bhatkal | Published on 19th June 2021, 8:05 PM | State News |

ಬೆಂಗಳೂರ:ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ  16 ಜಿಲ್ಲೆಗಳಲ್ಲಿ ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ.  ಅಗತ್ಯ ವಸ್ತು ಸೇರಿದಂತೆ ಹೊಟೇಲ್​, ರೆಸ್ಟೋರೆಂಟ್​ಗಳಿಗೆ ಸಂಜೆ 5ಗಂಟೆವರೆಗೂ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಜೊತೆಗೆ ಕೆಎಸ್​ಆರ್​ಟಿಸಿ ಬಸ್​ ಸಂಚಾರಕ್ಕೆ ಕೂಡ ಅವಕಾಶ ನೀಡಲಾಗಿದೆ. ಶೇ 50ರಷ್ಟು ಆಸನ ಭರ್ತಿಯೊಂದಿಗೆ ಬಸ್​ ಸಂಚಾರ ನಡೆಸಬಹುದಾಗಿದೆ. ಅನ್​ಲಾಕ್​ ಕುರಿತು ಮಾತನಾಡಿದ ಅವರು,  ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಮೊದಲಿನಂತೆ ಬಿಗಿ ನಿಲುವು ತೆಗೆದುಕೊಳ್ಳಬೇಕು. ಮಾಸ್ಕ್,ಸಾಮಾಜಿಕ ಅಂತರ ಕಾಪಾಡಬೇಕು. ಇದಕ್ಕೆ ರಾಜ್ಯದ ಜನ ಸಹಕರಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿದೆ ಎಂದು ತಿಳಿಸಿದರು
ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
ಯಾವುದಕ್ಕೆ ವಿನಾಯಿತಿ
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ  ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.  •
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ನಿಯಮ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
ರಾಜ್ಯಾದ್ಯಾಂತ ಜಾರಿ ಇರಲಿದೆ ನೈಟ್​ ಕರ್ಫ್ಯೂ
ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.  ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.   ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...