ಠಾಣೆಗಳಲ್ಲಿ ಎಲ್ಲ ಮಾದರಿಯ ದೂರು ಸ್ವೀಕರಿಸಬೇಕು; ಡಿಜಿಪಿ ಅಲೋಕ್ ಮೋಹನ್ ಸೂಚನೆ

Source: Vb | By I.G. Bhatkali | Published on 26th May 2023, 4:33 PM | State News |

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ನೀಡುವ ಎಲ್ಲ ಮಾದರಿಯ ದೂರುಗಳನ್ನು ಸ್ವೀಕರಿಸಬೇಕು. ಇಲ್ಲದಿದ್ದರೆ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಮಹಿಳೆ ಹಾಗೂ ಮಕ್ಕಳ ಸುರಕ್ಷತೆ, ಸೈಬರ್ ಕೈಂಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇನ್ನು ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತಾಂತ್ರಿಕ ತರಬೇತಿ ನೀಡಲಾಗು ವುದು. ನಗರ ಪ್ರದೇಶಗಳಲ್ಲಿ ಟ್ರಾಫಿಕ್ ನಿರ್ವಹಣೆ ಕೂಡ ಮುಖ್ಯ ವಾಗಿದ್ದು, ಎಲ್ಲಿಯೂ ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಹೆಚ್ಚು ಗಮನ ಹರಿಸಲಾಗುವುದು ಎಂದು ಅಲೋಕ್ ಮೋಹನ್ ಹೇಳಿದರು.

ರಾಜ್ಯಾದ್ಯಂತ ಪೊಲೀಸರ ದೈಹಿಕ ಸಾಮರ್ಥ್ಯದ ಬಗ್ಗೆಯೂ ಗಮನ ಹರಿಸಲಾಗುವುದು. ಅವರು ದೈಹಿಕವಾಗಿ ಸಧೃಡರಾಗಿರುವಂತೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಹಿರಿಯ ಅಧಿಕಾರಿಗಳಿಗೂ ಪ್ರಕರಣಗಳ ಬಗ್ಗೆ ಕಾಲ ಕಾಲಕ್ಕೂ ಪರಿಶೀಲನೆ ಮಾಡಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸರ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಅಲೋಕ್ ಮೋಹನ್ ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...