ವಿಧಾನಸಭಾ ಚುನಾವಣೆ; ಅಂತಿಮ ಕಣದಲಿ 2,613 ಅಭ್ಯರ್ಥಿಗಳು

Source: Vb | By I.G. Bhatkali | Published on 25th April 2023, 1:05 PM | State News |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ 2,613 ಅಭ್ಯರ್ಥಿಗಳು ಇದ್ದಾರೆ. ಈ ಪೈಕಿ 2,427 ಪುರುಷ, 184 ಮಹಿಳಾ ಹಾಗೂ ಇಬ್ಬರು ಇತರ ಅಭ್ಯರ್ಥಿಗಳಿದ್ದಾರೆ.

ಒಟ್ಟು 5,101 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಸೋಮವಾರ ಅಂತಿಮ ದಿನವಾಗಿತ್ತು. ಒಟ್ಟು 517 ಮಂದಿ ನಾಮಪತ್ರ ಹಿಂದೆಗೆದುಕೊಂಡರೆ, 1,971 ನಾಮಪತ್ರಗಳು ತಿರಸ್ಕೃತಗೊಂಡಿದ್ದವು.

ಬಿಜೆಪಿ-224, ಕಾಂಗ್ರೆಸ್-223, ಜೆಡಿಎಸ್-207, ಆಮ್ ಆದ್ಧಿ ಪಕ್ಷ-209, ಬಿಎಸ್ಪಿ -133, ಸಿಪಿಎಂ-4, ಜೆಡಿಯು-8, ಪಕ್ಷೇತರರು 918 ಸೇರಿದಂತೆ ಒಟ್ಟು 2,613 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

16 ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ಅಭ್ಯರ್ಥಿಗಳು ರಾಜಾಜಿನಗರ, ಹೊಸಕೋಟೆ, ಯಲಹಂಕ,

ಬ್ಯಾಟರಾಯನಪುರ, ಬಳ್ಳಾರಿ ನಗರ, ಹನೂರು, ಗೌರಿಬಿದನೂರು, ಚಿಕ್ಕ ಮಗಳೂರು, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್, ಕೋಲಾರ, ಗಂಗಾವತಿ, ಶ್ರೀರಂಗಪಟ್ಟಣ, ಕೃಷ್ಣರಾಜ, ನರಸಿಂಹರಾಜ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ㅎ ಅಭ್ಯರ್ಥಿಗಳಿದ್ದು, ಅಲ್ಲಿ ಎರಡು ಬ್ಯಾಲೆಟ್ ಯೂನಿಟ್ (ಇವಿಎಂ)ಗಳನ್ನು ಇರಿಸಲಾಗುತ್ತದೆ.

ಮೇ 10ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...