ಬೆಂಗಳೂರು: ಮುಖ್ಯಮಂತ್ರಿಯಿಂದ ಅನಗತ್ಯ ಹಸ್ತಕ್ಷೇಪ:ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು

Source: VB | By S O News | Published on 3rd April 2021, 12:54 AM | State News |

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂ ರಪ್ಪನವರು ನನ್ನ ಇಲಾಖೆಯ ವಿಚಾರಗಳಲ್ಲಿ ಕಾನೂನು ಮೀರಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ' ಎಂದು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ವರಿಷ್ಠರು ಮತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಫೆಬ್ರವರಿ 18ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎರಡು ಪುಟಗಳ ಸುದೀರ್ಘ ಪತ್ರವನ್ನು ಬರೆದಿರುವ ಈಶ್ವರಪ್ಪ, ಅದೇ ಪತ್ರದ ಪ್ರತಿಯನ್ನು ರಾಜ್ಯಪಾಲ
ವಜೂಭಾಯಿ ವಾಲಾ ಅವರಿಗೂ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ. 'ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವರ ಅಧಿಕಾರ ಮೊಟಕುಗೊಳಿಸಿ ಹಸ್ತಕ್ಷೇಪ ಮಾಡುತ್ತಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆ ಹಾಕಬೇಕು' ಎಂದು ಕೋರಿದ್ದಾರೆಂದು ಹೇಳಲಾಗಿದೆ.

“ಅತ್ಯಂತ ಹಿರಿಯ ಸಚಿವನಾಗಿರುವ ನನಗೆ ನನ್ನ ಇಲಾಖೆಯ ವಿಚಾರಗಳನ್ನು ನನ್ನ 

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವನಾದ ನನ್ನ ಇಲಾಖೆಗೆ ಸಂಬಂಧಿಸಿ, ಮುಖ್ಯಮಂತ್ರಿಯವರು ಕಳೆದ ಒಂದೂವರೆ ವರ್ಷಗಳಲ್ಲಿ ನನ್ನ ಅರಿವಿಗೆ ಬಾರದೆ ಕೈಗೊಂಡಿರುವ ಕೆಲವು ನಿರ್ದಿಷ್ಟ ನಿರ್ಧಾರಗಳು ಬಿಜೆಪಿ ಸರಕಾರದ ಹಿರಿಯ ಸಚಿವನಾದ ನನಗೆ ತೀವ್ರವಾದ ಅಸಮಾಧಾನ ವುಂಟುಮಾಡಿದೆ.

ಕೆ.ಎಸ್.ಈಶ್ವರಪ್ಪ, ಸಚಿವ

 

ಸಿಎಂ ತಕ್ಷಣ ರಾಜೀನಾಮೆ ನೀಡಲಿ: ಡಿಕೆಶಿ

ಬೆಂಗಳೂರು, ಮಾ.31: ಬಿಜೆಪಿಯ ಹಿರಿಯ ಸಚಿವರೊಬ್ಬರು ಮುಖ್ಯಮಂತ್ರಿಯ ವಿರುದ್ದ ಗಂಭೀರ ಆರೋಪಗಳನ್ನು ಮಾಡಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಆರೋಪಗಳು ಸತ್ಯಕ್ಕೆ ದೂರವಾಗಿದ್ದಲ್ಲಿ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು. ರಾಜ್ಯದ ಬಿಜೆಪಿ ಸರಕಾರ ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರಕಾರದಲ್ಲಿ ಎಲ್ಲವೂ  ಸರಿಯಿಲ್ಲ ಎಂಬುದು ಈಗ  ಜಗಜ್ಜಾಹೀರಾಗಿದೆ. ಶಾಸಕರಿಗೆ ಸಚಿವರ ಮೇಲೆ ನಂಬಿಕೆ ಇಲ್ಲ. ಸಚಿವರಿಗೆ ಸಿಎಂ ಮೇಲೆ ನಂಬಿಕೆಯಿಲ್ಲ. ಸಿಎಂಗೆ ಹೈಕಮಾಂಡ್ ಮೇಲೆ ನಂಬಿಕೆಯಿಲ್ಲ. ಒಟ್ಟಿನಲ್ಲಿ ಈ ಬಿಜೆಪಿ ಸರಕಾರ ಬಂದರೆ
ರಾಜ್ಯದ ಜನರಿಗೆ ಬೀದಿನಾಟಕ
ತಪ್ಪಿದಲ್ಲ!'

ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ

ಒಬ್ದ ಸಂಪುಟ ದರ್ಜೆ ಸಚಿವರು ತಮ್ಮ ನಾಯಕನ ವಿರುದ್ಧ ಲಿಖಿತವಾಗಿ ರಾಜ್ಯಪಾಲರು ಮತ್ತು ಕೇಂದ್ರದ ನಾಯಕರಿಗೆ ದೂರು ನೀಡಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು! ರಾಜ್ಯ ಬಿಜೆಪಿ ಸರಕಾರದಲ್ಲಿ ಇರುವ ಲಜ್ಜೆಗೇಡಿತನದ ಗುಂಪುಗಾರಿಕೆಗೆ ನೇರ ಸಾಕ್ಷಿ, ಬಿಜೆಪಿ ನಾಯಕರು ಇದು ಕಾಂಗ್ರೆಸ್ ಕೈವಾಡ ಎಂದು ಹೇಳದಿದ್ದರೆ ಅದು ಜನರ ಪುಣ್ಯ!

ರಮೇಶ್ ಬಾಬು, ಕಾಂಗ್ರೆಸ್‌ ವಕ್ತಾರ

 

ಗಮನಕ್ಕೆ ತರದೆ ಸಿಎಂ ತೀರ್ಮಾನಗಳನ್ನು ಕೈಗೊಳ್ಳುತ್ತಿರು ವುದು ನನಗೆ ತೀವ್ರ ಮುಜುಗರ, ನೋವು ತಂದಿದೆ' ಎಂದು ಬೇಸರ ವ್ಯಕ್ತಪಡಿಸಿರುವ ಈಶ್ವರಪ್ಪ, 'ಆರ್ಥಿಕ ಇಲಾಖೆ ಸಿಎಂ ಬಳಿಯೇ ಇದೆ. ಆದರೆ, ಇಲಾಖೆಯ ಮಹತ್ವದ ಯೋಜನೆ ಗಳಿಗೆ ಒಪ್ಪಿಗೆ ನೀಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆ ಯಾಗಿರುವ 1,200 ಕೋಟಿ
ರೂ.ಗಳಿಗೆ ಸಂಬಂಧಿಸಿದಂತೆ ಹಸ್ತಕ್ಷೇಪ ಮಾಡುತ್ತಿ ದ್ದಾರೆ' ಎಂದು ದೂರಿ ದ್ದಾರೆ.

ಸುಮಾರ್ಗಕ್ಕೆ ಅಡ್ಡಿ: '2020-21ರ ಆಯವ್ಯಯದಲ್ಲಿ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ದಿಗೆ ಗ್ರಾಮೀಣ ಸುಮಾರ್ಗ ಯೋಜನೆ' ಪ್ರಕಟಿಸಲಾಗಿತ್ತು. ಈ ಯೋಜನೆಯಡಿ ಐದು ವರ್ಷಗಳಲ್ಲಿ 20 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲು 780 ಕೋಟಿ ರೂ. ನಿಗದಿ ಮಾಡಲಾಗಿತ್ತು. ಪ್ರತಿ ಕ್ಷೇತ್ರದಲ್ಲಿ 30 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲು ಇಲಾಖೆ
ಎಲ್ಲ ಸಿದ್ಧತೆ ಮಾಡಿಕೊಂಡಿದ್ದರೂ, ನಿಗದಿ ಮಾಡಿದ ಹಣವನ್ನು ಆರ್ಥಿಕ ಇಲಾಖೆ ನೀಡುತ್ತಿಲ್ಲ' ಎಂದು ಈಶ್ವರಪ್ಪ ಪತ್ರದಲ್ಲಿ ಆಕ್ಷೇಪಿಸಿದ್ದಾರೆ. 'ಬಜೆಟ್‌ನಲ್ಲಿ ಘೋಷಿತ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದೆ ವಿಶೇಷ ಅನುದಾನದ ಹೆಸರಿನಲ್ಲಿ 1,439 ಕೋಟಿ ರೂ.ಗೆ ಅನುಮೋದನೆ ನೀಡಿದೆ. ಅಲ್ಲದೆ ಫೆ.17ರಂದು ಆರ್ಥಿಕ ಇಲಾಖೆ 81 ವಿಧಾನಸಭಾ ಕ್ಷೇತ್ರಗಳಿಗೆ 775 ಕೋಟಿ ರೂ. ಅನುಮೋದನೆ ನೀಡಿದೆ. ಒಂದೊಂದು ಕ್ಷೇತ್ರಕ್ಕೆ 5 ಕೋಟಿ ರೂ.ಗಳಿಂದ 23 ಕೋಟಿ ರೂ.ಗಳ ವರೆಗೆ ಅನುದಾನ ಹಂಚಿಕೆ ಮಾಡಲಾಗಿದೆ' ಎಂದು ಅವರು ದೂರಿದ್ದಾರೆ.

ಅಕ್ರಮಕ್ಕೂ ಕಾರಣ: 'ಮನಸೋ ಇಚ್ಛೆ ಹಣ ಬಿಡುಗಡೆಯಿಂದ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಇಲಾಖೆ ಯೋಜನೆಗಳ ಮೇಲೆ ದೀರ್ಘಾವಧಿಯಲ್ಲಿ ದುಷ್ಪರಿಣಾಮ ಬೀರಲಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡದಿದ್ದರೆ ಅಕ್ರಮಕ್ಕೂ ಕಾರಣವಾಗಲಿದೆ' ಎಂದು ಕಿ ಈಶ್ವರಪ್ಪ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರ ನಗರ ಜಿ.ಪಂ. ಅಧ್ಯಕ್ಷ ಮರಿಸ್ವಾಮಿ, ಸಿಎಂ ಬಿಎಸ್ ವೈ ಸಂಬಂಧಿಯೂ ಹೌದು. ಆರ್ಥಿಕ ಇಲಾಖೆಯ ಪತ್ರದಲ್ಲಿ ಬೆಂಗಳೂರು ನಗರ ಜಿ.ಪಂ.ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿ.ಪಂ. ಕ್ಷೇತ್ರಕ್ಕೆ 65 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಈ ಮೊತ್ತ ಬಿಡುಗಡೆ ಸಂಬಂಧ ಇಲಾಖೆ ಸಚಿವರ ಗಮನಕ್ಕೆ ತಂದಿಲ್ಲ' ಎಂದು ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿ ದ್ದಾರೆ.

ಅನಗತ್ಯ ಹಸ್ತಕ್ಷೇಪ

“ಕೋವಿಡ್ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಸಾರ್ವಜನಿಕರ ಹಣ ದುರುಪಯೋಗ ಸರಿಯಲ್ಲ. ಆರ್ಥಿಕ ಇಲಾಖೆಯ ಈ ವರ್ತನೆಯಿಂದ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ಮುಂದೆ ನಾನು ತೀವ್ರ ಮುಜುಗರಕ್ಕೆ ಒಳಗಾಗಿದ್ದೇನೆ. ಪಕ್ಷ ಅಧಿಕಾರದಲ್ಲಿದ್ದು, ನಮ್ಮ ಪಕ್ಷದ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿ, ವಿಪಕ್ಷಗಳ ಶಾಸಕರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಈ ನೀತಿಯನ್ನು ಬದಲಿಸಿಕೊಳ್ಳಬೇಕು ಎಂದು ಈಶ್ವರಪ್ಪ ಕೋರಿರುವ ಪತ್ರ ಸಾಮಾಜಿಕ ತಾಲತಾಣಗಳಲ್ಲಿ ವೈರಲ್ ಆಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...