ಬಿಜೆಪಿ ಹಿರಿಯ ಮುಖಂಡ ಸವದಿ ಕಾಂಗ್ರೆಸ್‌ಗೆ; ಬಿಜೆಪಿಗೆ ಭಾರೀ ಆಘಾತ; ಕಮಲ ಪಾಳಯದಲ್ಲಿ ವ್ಯಾಪಿಸಿದ ಭಿನ್ನಮತದ ಬೆಂಕಿ

Source: Vb | By I.G. Bhatkali | Published on 16th April 2023, 6:13 PM | State News |

ಬೆಂಗಳೂರು: ರಾಜ್ಯ ಬಿಜೆಪಿಯೊಳಗೆ ಬಂಡಾಯ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಶುಕ್ರವಾರ ಬೆಳಗಾವಿಯಿಂದಲೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಧಾವಿಸಿದ ಲಕ್ಷ್ಮಣ ಸವದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು. ನಂತರ ನಗರದ ಕ್ಲೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು.

ಬಿಜೆಪಿಗೆ ತಕ್ಕ ಪಾಠ
ಜೆಪಿ ಆಂತರಿಕ ಹುನ್ನಾರಕ್ಕೆ ರಾಜ್ಯದ ಜನ ಮೇ 10ರಂದು ತಕ್ಕ ಪಾಠ ಕಲಿಸುತ್ತಾರೆ. ಎಲ್ಲ ಪಕ್ಷಗಳಲ್ಲೂ ಲಿಂಗಾಯತ ಸಮುದಾಯದ ನಾಯಕರಿದ್ದಾರೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಿಂಗಾಯತ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ ಸ್ಪರ್ಧಿಸುವ ಶಿಗ್ಗಾಂವ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲೇ ಪ್ರಚಾರಕ್ಕೆ ಸೂಚನೆ ನೀಡಿದರೂ ನಾನು ಪ್ರಚಾರ ಮಾಡಲು ಸಿದ್ದ.

ಲಕ್ಷ ಣ ಸವದಿ, ಮಾಜಿ ಡಿಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ರಾಜ್ಯದಲ್ಲಿ 63 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ವಲಸೆ ಹೋಗುತ್ತಿದ್ದಾರೆ. ಶೇ.90ರಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಕೆಲವರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದು, ಮತ್ತೆ ಕೆಲವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಹೇಳಿದರು.

'ರಾಜ್ಯದ ಎಲ್ಲ ನಾಯಕರು, ಕಾರ್ಯಕರ್ತರ ಪರವಾಗಿ ಸವದಿ ಅವರನ್ನು ತುಂಬು ಹೃದಯದಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿ, ಶಾಸಕಾಂಗ ಪಕ್ಷದ ನಾಯಕರ ಜತೆ ಸಭೆ ಮಾಡಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಬೆಳಗಾವಿಯಲ್ಲಿ ಕಾರ್ಯಕ್ರಮ ಇರುವುದರಿಂದ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, 'ನಾವು ರಾಜಕೀಯವಾಗಿ ಇಷ್ಟು ದಿನ ಎದುರಾಳಿಗಳಾಗಿದ್ದೆವು. ಆದರೆ ಇಂದು
ಸವದಿ ಹೊಸ ನಂಬಿಕೆಯೊಂದಿಗೆ ತಮ್ಮ ಲಕ್ಷಾಂತರ ಕಾರ್ಯಕರ್ತರ ಜತೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನಾಯಕತ್ವದಲ್ಲಿ ನಂಬಿಕೆ ಇಟ್ಟು ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದಾರೆ ಎಂದರು.

ಬಿಜೆಪಿಯನ್ನು ಕಟ್ಟಿದ ಸವದಿ, ಈಶ್ವರಪ್ಪ, ನೆಹರೂ ಓಲೇಕಾರ್, ಲಿಂಗಣ್ಣ ಎಂ.ಪಿ.ಕುಮಾರಸ್ವಾಮಿ, ರಘುಪತಿ ಭಟ್, ಪುಟ್ಟಣ್ಣ ನಾಗೇಶ್, ಅಂಗಾರ, ಬೆಟ್ಟಸ್ವಾಮಿ, ಅನಿಲ್ ಬೆನಕೆ, ಮಹದೇವಪ್ಪ, ಗೂಳಿಹಟ್ಟಿ ಶೇಖರ್,  ಯು.ಬಿ.ಬಣಕಾರ್,  ಆರ್.ಶಂಕರ್ ಸೇರಿದಂತೆ ಅನೇಕ  ನಾಯಕರನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅವರು ದೂರಿದರು.

40 ಪರ್ಸೆಂಟ್ ಕಮಿಷನ್ ಸರಕಾರ ಈ ಬಾರಿ 40ಕ್ಕೂ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲಿದೆ. ಈ ನಾಯಕರು, ಅಧಿಕಾರಕ್ಕಾಗಿ ಪಕ್ಷ ಸೇರುತ್ತಿಲ್ಲ. ಅವರು ಅವರ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ, ಕರ್ನಾಟಕ ಬ್ಯಾಂಡ್ ಪುನರ್ ಸ್ಥಾಪನೆಗೆ ಈ ತೀರ್ಮಾನ ಮಾಡಿದ್ದಾರೆ ಎಂದು ಸುರ್ಜೆವಾಲ ಹೇಳಿದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿ ಮಾತನಾಡಿದ ಲಕ್ಷ್ಮಣ ಸವದಿ, 'ನನ್ನ ಕ್ಷೇತ್ರದ ಸುಮಾರು 30 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಮಾರ್ಗದರ್ಶಕರ ಸೂಚನೆಯಂತೆ ಕಾಂಗ್ರೆಸ್ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಯಾವ ರೀತಿ ನಿಷ್ಠೆಯಿಂದ ಕೆಲಸ ಮಾಡಿದ್ದೆನೋ, ಅದೇ ರೀತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ರಾಜಕಾರಣದ ಉದ್ದೇಶದಿಂದ ಪರಸ್ಪರ ಟೀಕೆ ಟಿಪ್ಪಣಿ ಮಾಡಿದ್ದೆವು. ಇವೆಲ್ಲವನ್ನು ಮರೆತು ಮುಂದಿನ ದಿನಗಳಲ್ಲಿ ನನ್ನನ್ನು ಮನೆ ಮಗನಂತೆ ಭಾವಿಸುವುದಾಗಿ ತಿಳಿಸಿದ್ದಾರೆ' ಎಂದು ಅವರು ಹೇಳಿದರು.

ಲಕ್ಷ್ಮಣ ಸವದಿ ಜೊತೆಗೆ ಮಾಜಿ ಸಚಿವ ಶಶಿಕಾಂತ ನಾಯ್ಕ, ಶಂಕರ್ ಗೌಡ ಕಾಂಗ್ರೆಸ್ ಪಕ್ಷ ಸೇರಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಮಾಜಿ ಶಾಸಕ ಅಶೋಕ್ ಪಟ್ಟಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...