ಮ.ಪ್ರ.: ದಿಲ್ಲಿಗೆ ತೆರಳುತ್ತಿದ್ದ ಕರ್ನಾಟಕದ ರೈತರು ಪೊಲೀಸ್ ವಶಕ್ಕೆ

Source: Vb | By I.G. Bhatkali | Published on 13th February 2024, 7:26 AM | State News | National News |

ಭೋಪಾಲ: 'ದಿಲ್ಲಿ ಚಲೋ' ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ರೈಲಿನಲ್ಲಿ ತೆರಳುತ್ತಿದ್ದ ಕನಿಷ್ಠ 70 ರೈತರನ್ನು ಸರಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಿಂದ ಸೋಮವಾರ ಮುಂಜಾನೆ ವಶಕ್ಕೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಲ್ಲಿಯತ್ತ ತೆರಳುತ್ತಿದ್ದ ರೈತರನ್ನು ಇಂದು ಮುಂಜಾನೆ ಬಲವಂತವಾಗಿ ಕೆಳಗಿಳಿಸಲಾಯಿತು ಹಾಗೂ ಜಿಲ್ಲಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ಜಿಆರ್‌ಪಿ ಅಧಿಕಾರಿ ತಿಳಿಸಿದ್ದಾರೆ.

"ಒಟ್ಟು 70 ರೈತರನ್ನು ಭೋಪಾಲ ರೈಲು ನಿಲ್ದಾಣದಲ್ಲಿ ಮುಂಜಾನೆ 3 ಗಂಟೆಗೆ ಪೊಲೀಸರು ಬಂಧಿಸಿದರು. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸಿದೆವು'' ಎಂದು ರೈತ ನಾಯಕ ಹಾಗೂ ಧಾರವಾಡ ಜಿಲ್ಲಾ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ ಅವರು ತಿಳಿಸಿದ್ದಾರೆ.

ಪೊಲೀಸರ ಕಾರ್ಯಾಚರಣೆ ಸಂದರ್ಭ ಓರ್ವ ಮಹಿಳೆ ಗಾಯಗೊಂಡಿದ್ದಾರೆ. ರೈತರ ಗುಂಪನ್ನು ರೈಲು ನಿಲ್ದಾಣದ ಹೊರಗೆ ವಶದಲ್ಲಿ ಇರಿಸಲಾಗಿತ್ತು. ಮುಖ್ಯವಾಗಿ ಅಸೌಖ್ಯ ಹೊಂದಿರುವವರಿಗೆ ಬಿಸಿ ನೀರಿನಂತಹ ಸೌಲಭ್ಯಗಳನ್ನೂ ನೀಡಿಲ್ಲ ಎಂದು ಎತ್ತಿನಗುಡ್ಡ ಅವರು ಹೇಳಿದರು.

ಮಂಗಳವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ದಿಲ್ಲಿಗೆ ರೈಲಿನಲ್ಲಿ ತೆರಳುತ್ತಿದ್ದ ಕರ್ನಾಟಕದ 100 ರೈತರನ್ನು ಭೋಪಾಲದಲ್ಲಿ ರಾಜ್ಯ ಪೊಲೀಸರು ತಡೆದಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಎಂ) ತಿಳಿಸಿದೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಸ್‌ಕೆಎಂ ದಕ್ಷಿಣ ಭಾರತ ಸಂಚಾಲಕ ಶಾಂತ ಕುಮಾರ್, ರೈಲಿನಲ್ಲಿ ಗುಂಪಿನೊಂದಿಗೆ ಪ್ರಯಾಣಿಸುತ್ತಿದ್ದೆವು. ಪೊಲೀಸರು ನಮ್ಮನ್ನು ಭೋಪಾಲ್ ನಿಲ್ದಾಣದಲ್ಲಿ ತಡೆದರು ಎಂದಿದ್ದಾರೆ.

2021ರಲ್ಲಿ ಪ್ರತಿಭಟನೆಯನ್ನು ಹಿಂಪಡೆಯುವ ಸಂದರ್ಭ ನಿಗದಿಪಡಿಸಿದ ಷರತ್ತುಗಳಲ್ಲಿ ಒಂದಾಗಿರುವ ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯವಾಗಿ ಉತ್ತರಪ್ರದೇಶ, ಹರ್ಯಾಣ ಹಾಗೂ ಪಂಜಾಬ್‌ನ ಹಲವು ರೈತ ಸಂಘಟನೆಗಳು ಫೆಬ್ರವರಿ 13ರಂದು ಪ್ರತಿಭಟನಾ ರ್ಯಾಲಿಗೆ ಕರೆ ನೀಡಿವೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...