ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ: ಅರ್ಜಿ ಹಾಗೂ ನಾಮ ನಿರ್ದೇಶನಗಳ ಆಹ್ವಾನ

Source: so news | Published on 16th September 2019, 8:39 PM | Coastal News | Don't Miss |

ಕಾರವಾರ:ಮಹಾತ್ನಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಟಿತ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆಯ್ಕೆ ಸಮಿತಿಯ ಮೊದಲ ಸಭೆಯಲ್ಲಿ ಅಸ್ಪøಷ್ಯತಾ ನಿವಾರಣೆ, ಅಹಿಂಸೆ, ಮಕ್ಕಳ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಪಾನ ನಿರೋಧ, ಖಾದಿ ಹಾಗೂ ಸ್ವದೇಶಿ ವಸ್ತುಗಳ ಬಳಕೆ ಮತ್ತು ಪ್ರೋತ್ಸಾಹ, ಅನುಸೂಚಿತ ಜಾತಿ ಮತ್ತು ಅನುಸೂಚಿತ ವರ್ಗಗಳಿಗೆ ಸೇರಿದ ಜನರ ಶ್ರೇಯೋಭಿವೃದ್ಧಿ ಕಾರ್ಯ ಚಟುವಟಿಕೆಗಳಲ್ಲಿ ಸ್ವ ಪ್ರೇರೆಣೆಯಿಂದ ತೊಡಗಿರುವ 60 ವರ್ಷ ವಯೋಮಾನ ಪೂರ್ಣಗೊಳಿಸಿರುವ ವ್ಯಕ್ತಿಗಳನ್ನು ಹಾಗೂ ಸೇವೆಯಲ್ಲಿ 25 ವರ್ಷ ಪೂರ್ಣಗೊಳಿಸಿರುವ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲು ತೀರ್ಮಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂತಹ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಗಳನ್ನು ಹಾಗೂ ಇಂತಹ ವ್ಯಕ್ತಿ ಅಥವಾ ಸಂಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವವರು ನಾಮ ನಿರ್ದೇಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಕಚೇರಿಯ ಇಮೇಲ್
[email protected]  ವಿಳಾಸಕ್ಕೆ ಸೆಪ್ಟೆಂಬರ್ 18ರಂದು ರಾತ್ರಿ 9ಗಂಟೆಯೊಳಗೆ ಕಳುಹಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...