ಬೆಂಗಳೂರು: ವಾರಾಂತ್ಯ ಕರ್ಪೂ: ಜನಜೀವನ ಅಸ್ತವ್ಯಸ್ತ

Source: S O News | By I.G. Bhatkali | Published on 9th January 2022, 4:51 PM | State News |

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಪೂಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಾಣಿಜ್ಯ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡು ಅಸ್ತವ್ಯಸ್ತಗೊಂಡಿತ್ತು. 

ಬೆಂಗಳೂರು, ಕೋಲಾರ, ಬೀದರ್‌, ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ 10ರ ವರೆಗೆ ಮೆಡಿಕಲ್‌ಗಳು, ತರಕಾರಿ, ಹಾಲು, ದಿನಪತ್ರಿಕೆ, ದಿನಸಿ ಅಂಗಡಿ, ಬೇಕರಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳು ತೆರೆದಿದ್ದವು. ಬೆರಳೆಣಿಕೆ ಸಂಖ್ಯೆಯಲ್ಲಿದ್ದ ಗ್ರಾಹಕರು ತಮಗೆ  ಬೇಕಾದ ವಸ್ತುಗಳನ್ನು ಖರೀದಿಸಿದರು. 10 ಗಂಟೆ ನಂತರ ಮೆಡಿಕಲ್‌ಗಳು ಮಾತ್ರ ತೆರೆದಿದ್ದು, ಉಳಿದೆಲ್ಲ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೈಗಾಡಿಗಳ ಮೇಲೆ ಸಂಚರಿಸಿ ತರಕಾರಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಪೊಲೀಸರು ಮನೆಗೆ ತೆರಳುವಂತೆ ದೃಶ್ಯವೂ ಕಂಡುಬಂದಿತು. ಬೆಂಗಳೂರು ಸೇರಿದಂತೆ ಇನ್ನಿತರ ನಗರದ ಭಾಗದ ಹೊರ ವಲಯದಲ್ಲಿರುವ ತರಕಾರಿ ಸಗಟು ಮಾರುಕಟ್ಟೆಗಳು ರೈತರು ಹಾಗೂ ವ್ಯಾಪಾರಿಗಳಿಂದ ಗಿಜಿಗುಡುತ್ತಿದ್ದವು. 10 ಗಂಟೆಯ ನಂತರ ಇಲ್ಲಿಯ ಮಾರುಕಟ್ಟೆಗಳನ್ನೂ ಬಂದ್ ಮಾಡಿಸಲಾಯಿತು.

ಪೊಲೀಸರು ನಗರದಾದ್ಯಂತ ಸಂಚರಿಸಿ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿದ್ದರಿಂದ ನಗರ ಮಧ್ಯಾಹ್ನದ ವೇಳೆಗೆ ಸ್ತಬ್ಧಗೊಂಡಿತ್ತು.

ಬಸ್ ಇದ್ದರೂ, ಪ್ರಯಾಣಿಕರಿಲ್ಲ: ಬೆಂಗಳೂರಿನಲ್ಲಿ ಕರ್ಥ್ಯ ಜಾರಿಯಲ್ಲಿದ್ದರೂ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ㅎ ಆದರೆ, ನಗರದ ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ ಸೇರಿ ಇನ್ನಿತರೆ ಬಸ್ ನಿಲ್ದಾಣದಲ್ಲಿ ಹಲವು ಬಸ್‌ಗಳಿದ್ದರೂ ಪ್ರಯಾಣಿಕರೇ ಇರಲಿಲ್ಲ.

ಪೊಲೀಸ್ ತಪಾಸಣೆ: ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಪೊಲೀಸರು ವಾಹನಗಳ ತಪಾಸಣೆ ನಡೆಸಿ, ಮಾಹಿತಿ ಕಲೆಹಾಕಿದರು.ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆಯ ಮುಕ್ಕಾಲು ಭಾಗ ಬಂದ್ ಮಾಡಲಾಗಿತ್ತು. ಪ್ರತಿ ವಾಹನವನ್ನು ಪರಿಶೀಲನೆ ಬಳಿಕವೇ ಕಳುಹಿಸಲಾಯಿತು.

ಬೆಂಗಳೂರಿನ ಪೊಲೀಸ್ ವ್ಯಾಪ್ತಿಯ ಉತ್ತರ ವಿಭಾಗ, ಆಗ್ನೆಯ ವಿಭಾಗ, ಈಶಾನ್ಯ ವಿಭಾಗ, ದಕ್ಷಿಣ ವಿಭಾಗ, જે ಕೇಂದ್ರ ವಿಭಾಗ, ವೈಟ್ ಫೀಲ್ಡ್ಗಳಲ್ಲೂ ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಡುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...