'ಗೃಹ ಜ್ಯೋತಿ'ಗೆ ಷರತ್ತು ಪ್ರಕಟ; 200 ಯುನಿಟ್‌ಗಳ ಬಳಕೆ ಮೀರಿದರೆ ಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕು

Source: Vb | By I.G. Bhatkali | Published on 6th June 2023, 8:16 AM | State News |

ಬೆಂಗಳೂರು: 'ಗೃಹ ಜ್ಯೋತಿ' ಯೋಜನೆಯಡಿ ರಾಜ್ಯದಲ್ಲಿನ ಪ್ರತೀ ಮನೆಗೆ ಪ್ರತೀ ತಿಂಗಳು ಗರಿಷ್ಠ 200 ಯುನಿಟ್‌ಗಳ ವರೆಗಿನ ಬಳಕೆಯ ಮಿತಿಯಲ್ಲಿ ಪ್ರತೀ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯುನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಲಾಗಿದೆ.

ಅದಕ್ಕನು ಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯುನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಜುಲೈ ತಿಂಗಳ ವಿದ್ಯುತ್‌ ಬಳಕೆಗೆ ಆಗಸ್ಟ್ ತಿಂಗಳಿನಿಂದ ನೀಡುವ ಅನ್ವಯ ವಾಗುವಂತೆ ಷರತ್ತುಗಳೊಂದಿಗೆ ಜಾರಿಗೆ ತರಲು ಸರಕಾರ ಆದೇಶಿಸಿದೆ.

ಷರತ್ತುಗಳು:
ಯೋಜನೆಯು ಗೃಹ ಬಳಕೆಯ ವಿದ್ಯುತ್ ಬಳಕೆಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ. ಪ್ರತೀ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಬೇಕು.

ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು ಹಾಗೂ ಗ್ರಾಹಕರು ನೆಟ್ ಬಿಲ್ ಅನ್ನು ಪಾವತಿಸಬೇಕು. ಅರ್ಹ ಯುನಿಟ್ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

ಈ ಯೋಜನೆಯಡಿ ಸೌಲಭ್ಯ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರತೀ ಫಲಾನು ಭವಿಯು ತನ್ನ ಕಸ್ಟಮರ್ ಐಡಿ ಅಥವಾ ಅಕೌಂಟ್ ಐಡಿ ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು. ಪ್ರಸಕ್ತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಬೇಕು.

ಜೂನ್ 30ರ ಅಂತ್ಯಕ್ಕೆ (ಜೂನ್ ತಿಂಗಳಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ ತಿಂಗಳಲ್ಲಿನ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್‌ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸಬೇಕು. ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿದೆ.

ಗೃಹ ವಿದ್ಯುತ್‌ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಗ್ರಾಹಕರಿಗೆ ನೀಡಿದ ಉಚಿತ ಮೊತ್ತವನ್ನು ಸರಕಾರದಿಂದ ವಿದ್ಯುತ್‌ ಸರಬರಾಜು ಕಂಪೆನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುವುದು ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾರ್ ಡಿ.ಎಂ. ತಿಳಿಸಿದ್ದಾರೆ.

ಒಂದು ಆರ್. ಆರ್. ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್‌: ರಾಜ್ಯ ಸರಕಾರದ ಗೃಹ ಜ್ಯೋತಿ ಯೋಜನೆಯಡಿ ಒಂದು ಆ‌.ಆ‌. ಸಂಖ್ಯೆಗೆ ಮಾತ್ರ 200 ಯುನಿಟ್ ವರೆಗಿನ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಗರದಲ್ಲಿ ಬೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರು ಮತ್ತು ಮಾಲಕರು ಎಂದು ನಾವು ಯಾವುದೇ ತಾರತಮ್ಯ ಮಾಡುತ್ತಿಲ್ಲ. ಸ್ಥಾವರ ಎಂದರೆ ಒಂದು ಆರ್. ಅರ್. ನಂಬರ್ ಎಂದು ಅರ್ಥ ಎಂದು ಹೇಳಿದರು.

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಆರ್.ಆರ್.ನಂಬರ್ ಹೊಂದಿದ್ದರೆ, ಒಂದು ಆರ್.ಆರ್.ಸಂಖ್ಯೆಗೆ ಮಾತ್ರ ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿ ಸಲಾಗುವುದು. ನಾವು ಯಾರಿಗೆ ಉಚಿತ ವಿದ್ಯುತ್ ಕೊಡುತ್ತೇವೆ ಎಂದು ಗೊತ್ತಾಗಬೇಕು. ಹೀಗಾಗಿ ಉಚಿತ ವಿದ್ಯುತ್‌ ಯೋಜನೆಗೆ ಅರ್ಜಿ ಕೇಳಿದ್ದೇವೆ ಎಂದು ಅವರು ಹೇಳಿದರು. ರಾಜ್ಯದಲ್ಲಿ 2.15 ಕೋಟಿ ಆರ್.ಆರ್.ನಂಬರ್‌ಗಳಿವೆ. ಈ ಯೋಜನೆ ಜಾರಿಗೆ 13 ಸಾವಿರ ಕೋಟಿ ರೂ. ಗಳು ಬೇಕು. ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರಕಾರ. ಹಳೆ ಬಾಕಿ ಎಲ್ಲವೂ ಅವರ ಕಾಲದ್ದು, ನಾವು ಅಧಿಕಾರಕ್ಕೆ ಬಂದ ನಂತರ ವಿದ್ಯುತ್‌ ದರ ಏರಿಕೆ ಮಾಡಿಲ್ಲ ಎಂದು ಜಾರ್ಜ್ ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...