ಬೆಂಗಳೂರು: 'ಗ್ಯಾರಂಟಿ': ಕ್ರಮಬದ್ಧವಾಗಿ ಅನುಷ್ಠಾನ; ಡಿಕೆ ಶಿವಕುಮಾರ್

Source: Vb | By I.G. Bhatkali | Published on 1st June 2023, 11:40 AM | State News |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು, ಸಚಿವರಿಗೆ ಮಾಹಿತಿಗಳನ್ನು ನೀಡಲಾಗಿದೆ. ಎಲ್ಲರೂ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವರು, ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ರಾಜ್ಯದ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅನೇಕ ಆಯ್ಕೆಗಳನ್ನು ನೀಡಿದ್ದಾರೆ. ನಾವು ಅದನ್ನು ಅರಿತಿದ್ದು, ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಿಗಳು ತಮ್ಮ ಅಭಿಪ್ರಾಯ, ಸಲಹೆ ತಿಳಿಸಿದ್ದಾರೆ. ಗುರುವಾರದ ಬದಲು ಶುಕ್ರವಾರ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ಮಾಡಿ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ. ಯಾರು ಕೂಡ ಊಹಾಪೋಹಗಳಿಗೆ ಅವಕಾಶ ನೀಡಬೇಡಿ ಎಂದು ಶಿವಕುಮಾರ್ ಮನವಿ ಮಾಡಿದರು.

ನಮ್ಮ ಪ್ರಣಾಳಿಕೆ, ಕೊಟ್ಟಿರುವ ಮಾತಿನ ಬಗ್ಗೆ ನಮಗೆ ಅರಿವಿದೆ. ಈ ಯೋಜನೆಗಳನ್ನು ಕ್ರಮಬದ್ದವಾಗಿ ಅನುಷ್ಠಾನಕ್ಕೆ ತರುವುದು ನಮ್ಮ ಆದ್ಯತೆ. ಕುಮಾರಸ್ವಾಮಿ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಏನಾದರೂ ಹೇಳಿಕೊಳ್ಳಲಿ. ಸಲಹೆಯಾದರೂ ನೀಡಲಿ, ಒತ್ತಡ ಬೇಕಾದರೂ ಹಾಕಲಿ, ಹೋರಾಟ ಬೇಕಾದರೂ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...