ಬೆಂಗಳೂರು: ಆಕ್ಸಿಜನ್ ಪೂರೈಸದ ಕೇಂದ್ರ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

Source: VB | By S O News | Published on 5th May 2021, 9:09 PM | State News |

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಅಭಾವ ದಿಂದಾಗಿ ಕೊರೋನಸೋಂಕಿತ ರೋಗಿಗಳು ಸಾವನ್ನಪ್ಪುತ್ತಿ ರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸದ ಕೇಂದ್ರ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೊರೋನ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ

ಚಾಮರಾಜನಗರ,  ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸಿಗದೆ   ಮತ್ತೆಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಬೇಕು?

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ

ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಅರ್ಜಿಗಳ ವಿಚಾರಣೆ ವೇಳೆ ಆಕ್ಸಿಜನ್ ಕೊರತೆಯನ್ನೇ ಪ್ರಮುಖವಾಗಿ ಪರಿಗಣಿಸಿದ ಪೀಠ, ರಾಜ್ಯಕ್ಕೆ ಎಷ್ಟು ಆಕ್ಸಿಜನ್ ಅವಶ್ಯಕತೆ ಇದೆ. ಕೊರತೆ ಎಷ್ಟಿದೆ ಹಾಗೂ ಕೇಂದ್ರದಿಂದ ಪೂರೈಕೆಯಾಗುತ್ತಿರುವ ಆಕ್ಸಿಜನ್ ಪ್ರಮಾಣವೆಷ್ಟು ಎಂದು ಕೇಂದ್ರ ಹಾಗೂ ರಾಜ್ಯದ ಪರ ವಕೀಲರನ್ನು ಪ್ರಶ್ನಿಸಿತು. ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮಾಹಿತಿ ನೀಡಿ, ಮೇ 5ರ ಪ್ರಕಾರ ರಾಜ್ಯಕ್ಕೆ 1,700 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. ಸರಕಾರವೇ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ಕೇಂದ್ರದ ಪರ ವಕೀಲರಾದ ಎನ್. ಕುಮಾರ್‌ ಮಾಹಿತಿ ನೀಡಿ, ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ರಾಜ್ಯಕ್ಕೆ ಅಗತ್ಯವಿರುವಂತೆ 802 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ನಿರ್ದೇಶಿಸಿತ್ತು. ಕೇಂದ್ರ ಸರಕಾರ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 865 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಏರಿಕೆಯಾಗಿದ್ದು, 1,700 ಮೆ. ಟನ್ ಅಗತ್ಯವಿದೆ. ಅದನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕೇಂದ್ರದಿಂದ ಸ್ಪಷ್ಟನೆ ಪಡೆದು ಮಾಹಿತಿ ನೀಡುವಂತೆ ತಿಳಿಸಿ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.

ಮಧ್ಯಾಹ್ನದಕಲಾಪದ ವೇಳೆಕೇಂದ್ರದ ಪರವಕೀಲರು ರಾಜ್ಯಕ್ಕೆ ಹೆಚ್ಚಿನ ಆಕ್ಸಿಜನ್ ಪೂರೈಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಸಮಯಾವಕಾಶ ನೀಡಬೇಕು ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ ಚಾಮರಾಜನಗರ, ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸಿಗದೆ ಮತ್ತೆಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಬೇಕು ಎಂದು ಪ್ರಶ್ನಿಸಿತು. ಜತೆಗೆ ರಾಜ್ಯದಲ್ಲಿ ಕೋವಿಡ್ ಮಿತಿ ಮೀರುತ್ತಿದೆ. ಬೆಂಗಳೂರು ಬಿಟ್ಟು ಎಲ್ಲಾದರೂ ದಿನಕ್ಕೆ 20 ಸಾವಿರಕ್ಕೂ ಅಧಿಕ ಪ್ರಕರಣಗಳಿವೆಯೇ. ಬೇರೆ ರಾಜ್ಯಗಳಿಗೆ ಪೂರೈಕೆಯಾಗುತ್ತಿರುವ ಆಕ್ಸಿಜನ್‌ನ್ನು ರಾಜ್ಯಕ್ಕೆ ಪೂರೈಸಬಹುದಲ್ಲವೇ ಎಂದು ಕೇಳಿತು.

ಇದಕ್ಕೆ ಸ್ಪಷ್ಟನೆ ನೀಡಿದ ಕೇಂದ್ರದ ಪರ ವಕೀಲರು, ಆಕ್ಸಿಜನ್ ಪೂರೈಕೆ ವಿಚಾರವನ್ನು ಒಂದೇ ಇಲಾಖೆ ನಿರ್ಧರಿಸುವುದಿಲ್ಲ. ಸಂಬಂಧಪಟ್ಟ ಇಲಾಖೆಗಳು ಹಾಗೂ ಪ್ರಾಧಿಕಾರಗಳು ಸಭೆ ನಡೆಸಿ ತೀರ್ಮಾನಿಸಬೇಕು. ಹೀಗಾಗಿ ಈ ವಿಚಾರವಾಗಿ ಸ್ಪಷ್ಟನೆ ನೀಡಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ವಾದ ದಾಖಲಿಸಿಕೊಂಡ ಪೀಠ, ನಾಳೆ ಕೇಂದ್ರ ಸರಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಈ ಸಂಬಂಧ ಆದೇಶ ಹೊರಡಿಸಲಿದೆ. ಹೀಗಾಗಿ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದಿಸಿ, ಕೋಲಾರದಲ್ಲಿ ಖುದ್ದು ಜಿಲ್ಲಾ ನ್ಯಾಯಾಧೀಶರಿಗೇ ಆಕ್ಸಿಜನ್ ಬೆಡ್ ಲಭ್ಯವಾಗುತ್ತಿಲ್ಲ. ಬೆಂಗಳೂರು ನಗರದಲ್ಲಿ 10ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಪೂರೈಕೆ ಇಲ್ಲ ಎಂದು ಆರೋಪಿಸಿದರು. ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಮಾಹಿತಿ ನೀಡಿ, ಪಾಲಿಕೆ ವ್ಯಾಪ್ತಿಯಲ್ಲಿ ಈಗಿರುವುದರ ಜತೆಗೆ 268 ಎಚ್‌ಡಿಯು ಬೆಡ್‌ಗಳು, 57 ಐಸಿಯು ಬೆಡ್‌ಗಳು, 54 ಐಸಿಯು ವೆಂಟಿಲೇಟರ್‌ ಬೆಡ್ ಗಳನ್ನು ಹೆಚ್ಚಿಸಲಾಗಿದೆ ಎಂದರು. ರಾಜ್ಯ ಸರಕಾರದ ಪರ ವಕೀಲರು ಮಾಹಿತಿ ನೀಡಿ ರಾಜ್ಯಕ್ಕೆ ಪ್ರತಿದಿನ 44 ಸಾವಿರ ಬಾಟಲ್ ರೆಮ್‌ಡೆಸಿರ್ ಬೇಕಾಗಿದ್ದು, ಕೇಂದ್ರ ಸರಕಾರ ಎಪ್ರಿಲ್ 21ರಿಂದ ಮೇ 9ರವರೆಗೆ ಒಟ್ಟು 3,01,330 ಬಾಟಲ್ ಪೂರೈಸಿದೆ ಎಂದರು.

ದಿಲ್ಲಿ: ಆಮ್ಲಜನಕ ಪೂರೈಸಲು ವಿಫಲ ಕೇಂದ್ರ ಸರಕಾರಕ್ಕೆ ದಿಲ್ಲಿ ಹೈಕೋರ್ಟ್ ತರಾಟೆ

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಆದೇಶದಂತೆ ದಿಲ್ಲಿಗೆ ಆಮ್ಲಜನಕ ಪೂರೈಸದ ಕೇಂದ್ರ ಸರಕಾರವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

ನೀವು ಉಷ್ಟ್ರಪಕ್ಷಿಯಂತೆ ತಲೆಯನ್ನು ಮರಳಿನಲ್ಲಿ ಬಚ್ಚಿಡಬಹುದು.

“ನೀವು ಉಷ್ಣಪಕ್ಷಿಯಂತೆ ತಲೆಯನ್ನು ಮರಳಿನಲ್ಲಿ ಬಚ್ಚಿಡಬಹುದು. ಆದರೆ, ನಾವು ಹಾಗೆ ಮಾಡಲಾರೆವು'

ಆದರೆ, ನಾವು ಹಾಗೆ ಮಾಡಲಾರೆವು. ನೀವು ದಂತಗೋಪುರದಲ್ಲಿ ಬದುಕುತ್ತಿದ್ದೀರಾ? ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದ ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಕೇವಲ 490 ಮೆಟ್ರಿಕ್ ಟನ್ ಬದಲು 700 ಮೆಟ್ರಿಕ್ ಟನ್ ಆಮ್ಲಜನಕವನ್ನು ದಿಲ್ಲಿಗೆ ಪೂರೈಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೀಡಿದ ಆದೇಶದ ಬಗ್ಗೆ ಗಮನ ಸೆಳೆದರು.

ದಿಲ್ಲಿಗೆ ಆಮ್ಲಜನಕದ ಪೂರ್ಣ ಪಾಲನ್ನು ಕೂಡಲೇ ಪೂರೈಕೆ ಮಾಡುವ ಕುರಿತು ದಿಲ್ಲಿ ಉಚ್ಚ ನ್ಯಾಯಾಲಯ ಹಾಗೂ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿರುವ ಬಗ್ಗೆ ನ್ಯಾಯಾಧೀಶರು ಕಿಡಿ ಕಾರಿದರು. ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಹಾಗೂ ರೇಖಾ ಪಲ್ಲಿ ಅವರನ್ನೊಳಗೊಂಡ ದಿಲ್ಲಿ ಉಚ್ಚ ನ್ಯಾಯಾಲಯದ ವಿಭಾಗೀಯ ನ್ಯಾಯ ಪೀಠ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಯಾಕೆ ದಾಖಲಿಸಬಾರದು ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿತು.

ಆಮ್ಲಜನಕ ಪೂರೈಸಲು ವಿಫಲ

ದಿಲ್ಲಿಗೆ ಅಗತ್ಯ ಇರುವ ಆಮ್ಲಜನಕವನ್ನು ಪೂರೈಕೆ ಮಾಡಬೇಕೆಂಬ ಸುಪ್ರೀಂ ಕೋರ್ಟ್ ಹಾಗೂ ದಿಲ್ಲಿ ಉಚ್ಚ ನ್ಯಾಯಾಲಯದ ಆದೇಶವನ್ನು ಅನುಸರಿಸುವಲ್ಲಿ ವಿಫಲವಾಗಿ ರುವ ಕುರಿತ ಶೋಕಾಸ್ ನೋಟಿಸಿಗೆ ಉತ್ತರಿಸುವಂತೆ ನಿರ್ದೇಶಿಸಿತು.

ಸಾಕು, ಆಮ್ಲಜನಕ ಪೂರೈಕೆಗೆ ಸಂಬಂಧಿಸಿ 'ಇಲ್ಲ' ಎಂಬ ಮಾತನ್ನು ನಾವು ಪರಿಗಣಿಸುವುದಿಲ್ಲ. ನೀವು ಕೂಡಲೇ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸದೇ ಇರಲು ಬೇರೆ ದಾರಿ ಇಲ್ಲ. ಅನುಸರಣೆ ಹೊರತುಪಡಿಸಿ ನಾವು ಯಾವುದನ್ನೂ ಆಲಿಸಲಾರೆವು ಎಂದು ನ್ಯಾಯಪೀಠ ಕಟುವಾಗಿ ಹೇಳಿತು.

ಎರಡು ವಾರಗಳಿಗಿಂತ ಹೆಚ್ಚು ಕಾಲ ಆಮ್ಲಜನಕ ಪೂರೈಕೆಯಲ್ಲಿ ಕೊರತೆ ಕುರಿತ ಮನವಿಗಳ ಗುಚ್ಛದ ವಿಚಾರಣೆಯನ್ನು ನ್ಯಾಯಾಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅನುಸರಣಾ ಅಫಿಡವಿಟ್ ಅನ್ನು ಬುಧವಾರ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಲಾಗುವುದು ಎಂದು ಕೇಂದ್ರ ಸರಕಾರ ಹೇಳಿದಾಗ ಪೀಠ, ದಿಲ್ಲಿಗೆ ಅಗತ್ಯವಿರುವ ಆಮ್ಲಜನಕವನ್ನು ನೀಡದಿರುವಾಗ ಅಫಿಡವಿಟ್ ಏನು ಸಾಧಿಸುತ್ತದೆ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳುವುದರಲ್ಲಿ ವಿಫಲರಾಗಿದ್ದೀರಿ. ದಿಲ್ಲಿಗೆ ಹಂಚಿಕೆ ಮಾಡಲಾದ ಆಮ್ಲಜನಕವನ್ನು ಒಂದು ದಿನವೂ ಪೂರೈಸಿಲ್ಲ ಎಂದು ಹೇಳಿತು.

“ನೀವು ಎಲ್ಲದಕ್ಕೂ ವ್ಯವಸ್ಥೆ ಮಾಡಬೇಕು. ನೀವು ಆಮ್ಲಜನಕ ಹಂಚಿಕೆ ಮಾಡಬೇಕು. ನೀವು ಅದನ್ನು ಈಡೇರಿಸಬೇಕು. 8 ಜೀವಗಳನ್ನು ಕಳೆದುಕೊಂಡಿದ್ದೇವೆ. ನಾವು ಕಣ್ಣು ಮುಚ್ಚಿ ಕೊಂಡಿರಲು ಸಾಧ್ಯವಿಲ್ಲ" ಎಂದು ಪೀಠ ಹೇಳಿತು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...