ಬೆಂಗಳೂರು: ಬಿಎಸ್‌ವೈ ಆಪ್ತನ ಮನೆ-ಕಚೇರಿ ಮೇಲೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ

Source: VB | By I.G. Bhatkali | Published on 8th October 2021, 6:51 PM | State News |

ಬೆಂಗಳೂರು: ದೊಡ್ಡ ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತನ ಮನೆ, ಕಚೇರಿ ಸೇರಿದಂತೆ 50 ಸ್ಥಳಗಳಲ್ಲಿ ದಿಢೀರ್‌ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಬಿಎಸ್‌ವೈ ಆಪ್ತ ಉಮೇಶ್ ಎಂಬವರ ಬೆಂಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿನ ಅವರ ಮನೆ ಮತ್ತು ಅವರ ಆಪ್ತರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಿಎಸ್‌ವೈ ಸಿಎಂ ಆಗಿದ್ದವೇಳೆ ಉಮೇಶ್, ಅವರಿಗೆ ಆಪ್ತ ಸಲಹೆಗಾರರಾಗಿದ್ದರು ಎನ್ನಲಾಗಿದೆ.

ರಾಜ್ಯದ ವಿವಿಧೆಡೆಗಳಲ್ಲಿ ಐಟಿ ದಾಳಿ ನಡೆದಿದೆ ಎಂಬ ಮಾಹಿತಿ ಬಂದಿದೆ. ನನಗೆ ಇನ್ನೂ ವಿವರವಾದ ಮಾಹಿತಿ ಬಂದಿಲ್ಲ. ಆದಾಯ ತೆರಿಗೆ ಇಲಾಖೆ ದಾಳಿಗೂ ಸರಕಾರಕ್ಕೂ ಸಂಬಂಧವಿಲ್ಲ. ಯಾರ ಮೇಲೆ ಮತ್ತು ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲದ ಕಾರಣ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ.

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಉಮೇಶ್ ನನ್ನ ಆಪ್ತ ಆತ ನನ್ನ ಜೊತೆಗೆ ಕೆಲಸ ಮಾಡುತ್ತಿದ್ದ ದಾಳಿಗೆ ಕಾರಣವೇನು ಎನ್ನುವುದು ಗೊತ್ತಿಲ್ಲ. ನೋಡಿಯೇ ಮಾಹಿತಿ ಗೊತ್ತಾಗಿದೆ. ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಲು ಆಗುವುದಿಲ್ಲ. ಪೂರ್ವ ತಯಾರಿಯೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ.  ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ

ದಾಳಿಗೆ ಒಳಗಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಚಾಲಕ ಕಂ ನಿರ್ವಾಹಕ ಉಮೇಶ್, ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಆ ಮನೆ ಸೇರಿ ಒಂಭತ್ತು ಕಡೆಗಳಲ್ಲಿ ಐಟಿ ದಾಳಿ ನಡೆದಿದ್ದು, ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಆಪ್ತಸಹಾಯಕನಾಗಿ ನಿಯೋಜನೆಗೊಂಡಿದ್ದ ಉಮೇಶ್, ಯಡಿಯೂರಪ್ಪರ ಜತೆಯಲ್ಲಿಯೇ ಇರುತ್ತಿದ್ದರಲ್ಲದೆ, ಅವರ ಕಾರ್ಯಕ್ರಮಗಳ ಹೊಣೆ ಹೊತ್ತಿದ್ದರು ಎಂದು ಗೊತ್ತಾಗಿದೆ.

ಶಿವಮೊಗ್ಗಜಿಲ್ಲೆಆಯನೂರುಮೂಲದಉಮೇಶ್, ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಸಂಪರ್ಕದಿಂದ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಯಡಿಯೂರಪ್ಪ ಹಾಗೂ ಅವರ ಪುತ್ರ ರಾಘವೇಂದ್ರರ ವಿಶ್ವಾಸ ಗಳಿಸಿ ಅವರಿಗೆ ಆಪ್ತ ಸಹಾಯಕರಾಗಿ ಸೇರಿಕೊಂಡಿದ್ದರು. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೂ ಆಪ್ತರಾಗಿದ್ದ ಎಂದು ಹೇಳಲಾಗಿದೆ.

ಉಮೇಶ್ ಐಟಿ ವಶಕ್ಕೆ?

ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಗಾಗಿದ್ದ ಬಿಎಸ್‌ವೈ ಆಪ್ತ ಉಮೇಶ್ ಎಂಬವರನ್ನು ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆಂದು ಗೊತ್ತಾಗಿದೆ. ಉಮೇಶ್ ಅಕ್ರಮಗಳಿಗೆ ಸಾಥ್ ನೀಡಿದ ಆರೋಪದ ಮೇಲೆ ಅರವಿಂದ ಎಂಬವರನ್ನು ವಿಚಾರಣೆ ನಡೆಸಿದ್ದಾರೆ. ಉತ್ತರಹಳ್ಳಿ ಮತ್ತು ಆರ್.ಟಿ. ನಗರದಲ್ಲಿನ ಅರವಿಂದ ನಿವಾಸದ ಮೇಲೆಯೂ ದಾಳಿ ನಡೆಸಿದ್ದ ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ.

Read These Next

ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ - ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ

ಶಿವಮೊಗ್ಗ : ಡಿಸೆಂಬರ್ 10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣಾ ಕಾರ್ಯಕ್ಕೆ ...

ವಿಶ್ವ ವಿಕಲಚೇತನರ ದಿನಾಚರಣೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಕಾರ, ನ್ಯಾಯಾಧೀಶೆ ಪುಪ್ಷಲತಾ.

ಧಾರವಾಡ : ವಿಕಲಚೇತನರಿಗೆ ಅನುಕಂಪದ ಕಾರಣದಿಂದ ಅವಕಾಶ ವಂಚಿತರಾಗಬಾರದು, ಇಂತಹ ಮಕ್ಕಳಿಗೆ ಅಸಡ್ಯೆ ತೋರದೆ ಕಾಳಜಿ ಪೂರ್ವಕವಾಗಿ ...