ಕೇಂದ್ರದಿಂದ ರಾಜ್ಯ ಸರಕಾರದ ಸರ್ವರ್ ಗಳ ಹ್ಯಾಕ್: ಸತೀಶ್ ಜಾರಕಿಹೊಳಿ

Source: Vb | By I.G. Bhatkali | Published on 21st June 2023, 11:30 AM | State News |

ಬೆಳಗಾವಿ: ಗ್ಯಾರಂಟಿ ಯೋಜ ನೆಗಳ ಜಾರಿಗೆ ಪ್ಲಾನ್ ಮಾಡಿದ್ದೇವೆ. ಆದರೆ, ಕೇಂದ್ರ ಸರಕಾರವು ನಮ್ಮ ಸರ್ವರ್ ಅನ್ನು ಹ್ಯಾಕ್ ಮಾಡಿದ್ದರಿಂದ ಸೇವಾ ಸಿಂಧು ವೆಬ್‌ಸೈಟ್ ಕಾರ್ಯ ನಿರ್ವಹಿಸ ದಂತಾಗಿತ್ತು ಎಂದು ಲೋಕೋಪ ಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಪೂರೈ ಸಲು ನಿರಾಕರಿಸಿರುವ ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ನಡೆದ ಪ್ರತಿಭಟ ನೆಯಲ್ಲಿ ಭಾಗಿಯಾದ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ಲಾನ್ ಮಾಡದೇ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ವಿಚಾರಕ್ಕೆ ಈ ರೀತಿ ಉತ್ತರಿಸಿದರು.

ಇವಿಎಂ ರೀತಿಯಲ್ಲಿ ಕೇಂದ್ರ ಸರಕಾರವು ರಾಜ್ಯ ಸರಕಾರದ ಸರ್ವರ್ ಹ್ಯಾಕ್ ಮಾಡಿದೆ. ಅದನ್ನು ಸರಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಎಷ್ಟೇ ಹ್ಯಾಕ್ ಮಾಡಿ ದರೂ ನಮ್ಮ ಯೋಜನೆ ಜಾರಿಗೆ ತರು ತ್ತೇವೆ ಎಂದು ಜಾರಕಿಹೊಳಿ ತಿಳಿಸಿದರು.

ಇನ್ನು ಆನ್‌ಲೈನ್‌ನಲ್ಲಿ ಸಮಸ್ಯೆ ಆದರೆ ಕೈಯಿಂದ ಅರ್ಜಿ ಸ್ವೀಕಾರ ಮಾಡುತ್ತೇವೆ. ಒಂದು ತಿಂಗಳು ತಡ ಆಗಬಹುದು. ಅದಕ್ಕಿಂತ ಹೆಚ್ಚು ವಿಳಂಬ ಆಗುವುದಿಲ್ಲ ಎಂದರು. ಇದೇ ವೇಳೆ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಈ ವಿಚಾರವನ್ನು ಸಿದ್ದರಾಮಯ್ಯನವರನ್ನೇ ನೀವು ಕೇಳಬೇಕು ಎಂದು ಜಾರಕಿಹೊಳಿ ಹೇಳಿದರು. ಲೋಕಸಭೆ ಚುನಾವಣೆವರೆಗೂ ಅಷ್ಟೇ ಅಲ್ಲ ಐದು ವರ್ಷದವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.

ತಜ್ಞರಿಂದ ಮಾಹಿತಿ ಪಡೆದು ಉತ್ತರ: ಡಿಕೆಶಿ
ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದ್ದರಿಂದ ಸೇವಾ ಸಿಂಧು ವೆಬ್ ಸೈಟ್ ಕಾರ್ಯ ನಿರ್ವಹಿಸದಂತಾಗಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಡಿರುವ ಆರೋಪಕ್ಕೆ ಮಂಗಳವಾರ ವಿಧಾನ ಸೌಧದ ಮುಂಭಾಗ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಾನು ತಾಂತ್ರಿಕ ವಿಷಯದಲ್ಲಿ ಪರಿಣಿತನಲ್ಲ, ತಜ್ಞರಿಂದ ಮಾಹಿತಿ ಪಡೆದು ಉತ್ತರ ನೀಡುವೆ ಎಂದು ಹೇಳಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...