ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳ ಸಹಕಾರ ಅಗತ್ಯ-ಸಾಜೀದ್ ಮುಲ್ಲಾ

Source: sonews | By Staff Correspondent | Published on 18th October 2019, 5:25 PM | Coastal News |

ಭಟ್ಕಳ: ನ.1 ರಂದು ಆಚರಿಸಲ್ಪಡುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಯಶಸ್ವಿಗೆ ಎಲ್ಲ ಇಲಾಖೆಯ ಅಧಿಕಾರಿಗಳ ಸಹಕಾರ ಅಗತ್ಯವೆಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಸಾಜೀದ್ ಆಹ್ಮದ್ ಮುಲ್ಲಾ ಹೇಳಿದರು. 

ಅವರು  ಇಲ್ಲಿನ ತಹಸಿಲ್ದಾರ್ ಕಚೇರಿಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಕ್ಲಪ್ತ ಸಮಯಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಭುವನೇಶ್ವರಿ ದೇವಿ ಮೆರವಣೆಗೆಯಲ್ಲಿ ಭಾಗವಹಿಸುವುದು, ಕಳೆದ ವರ್ಷದಂತೆ ಈ ಬಾರಿಯೂ ಕೂಡ ಸ್ತಬ್ದಚಿತ್ರ ಪ್ರದರ್ಶನ ಹಾಗೂ ಸಭಾ ಕಾರ್ಯಕ್ರಮದ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಾವುಟ ಪ್ರದರ್ಶನಕ್ಕೆ ಅವಕಾಶ ನೀಡದೆ ಪ್ಲಾಸ್ಟಿಕ್ ಮುಕ್ತ ರಾಜ್ಯೋತ್ಸವ ಆಚರಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ವಿ.ಪಿ.ಕೊಟ್ರಳ್ಳಿ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ್, ಕ್ಷೇತ್ರ ಶಿಕ್ಷಣಾಧಿಕಾರಿಗ ಎಂ.ಆರ್.ಮುಂಜಿ,  ಜಿ.ಪಂ. ಕಾರ್ಯನಿರ್ವಾಹಕ ಅಭಿಯಂತರ ಫಯ್ಯಾಝ್, ಪುರಸಭೆ ಸದಸ್ಯ ಕೆ.ಎಂ.ಅಶ್ಫಾಖ್, ಸಾಹಿತ್ಯ ಪರಿತಷತ್ ಅಧ್ಯಕ್ಷ ಗಂಗಾಧರ್ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ನಾಗರೀಕರು ಉಪಸ್ಥಿತರಿದ್ದರು. 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...