ಶಿವಮೊಗ್ಗ: ಸಾವರ್ಕರ್ ಪ್ಲೆಕ್ಸ್ ತೆರವು ವಿವಾದ; ಎರಡು ಗುಂಪುಗಳ ನಡುವೆ ಗಲಾಟೆ, ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ

Source: Vb | By I.G. Bhatkali | Published on 16th August 2022, 11:11 AM | State News |

ಶಿವಮೊಗ್ಗ: ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಟಾಪಟಿಯಾ ಗಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮದ್‌ ವೃತ್ತದಲ್ಲಿ ಸೋಮವಾರ ನಡೆದಿದೆ.

75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮೀರ್ ಅಹಮದ್‌ ವೃತ್ತದಲ್ಲಿ ಸಾವರ್ಕರ್ ಫೋಟೊವನ್ನು ಹಾಕಲಾಗಿತ್ತು. ಈ ವೇಳೆ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಇಡಲು ಇನ್ನೊಂದು ಗುಂಪು ಹೊರಟಿದೆ. ಈ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ಉಂಟಾಗಿದೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಎರಡು ಗುಂಪುಗಳ ಸಾನುವೆ ಗಲಾಟೆಯಾಗಿದ್ದು ಶಿವಮೊಗ್ಗ ನಗರ ಮತ್ತು ಭದ್ರಾವತಿ ನಗರದಲ್ಲಿ ಎರಡೂ ಕಡೆ 144 ಸೆಕ್ಷನ್ ಜಾರಿಗೊಳಿಸಲಾಗಿ ದೆ. 8 ಕೆಎಸ್ ಆರ್ ಪಿ, 10 ಡಿಎಆರ್ ಮತ್ತು ಒಂದು ಬ್ಯಾಪಿಡ್ ಆ್ಯಕ್ಷನ್ ಫೋರ್ಸ್ ತುಕಡಿ ನಿಯೋಜಿಸಲಾಗಿದೆ. ರಾತ್ರಿಗೆ ಇನ್ನೂ ಹೆಚ್ಚಿನ ಫೋರ್ಸ್ ನಗರಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಸದ್ಯಕ್ಕೆ ಸಿಟಿಯಲ್ಲಿ ಅಂಗಡಿಗಳನ್ನು ಬಂದ್  ಮಾಡಲಾಗಿದೆ.
ಡಾ.ಬಿ.ಎಂ ಲಕ್ಷ್ಮೀ ಪ್ರಸಾದ್, ಎಸ್ಪಿ

ಎರಡು ಕೋಮಿನ ನಡುವೆ ಗಲಾಟೆ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಸಾವರ್ಕರ್ ಫೋಟೊ ತೆರವು ಮಾಡಿ ಎರಡು ಕೋಮಿನವರಿಗೆ ಶಾಂತವಾಗಿರಲು ಸೂಚಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಸಾವರ್ಕರ್ ಫೋಟೊ ತೆರವು ಮಾಡಿದಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ಮತ್ತೊಂದು ಗುಂಪು ನುಗ್ಗಲು ಯತ್ನಿಸಿದೆ. ಕೂಡಲೇ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ:
ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರ ವ್ಯಾಪ್ತಿ ಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.16ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆ‌. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಓರ್ವನಿಗೆ ಚಾಕು ಇರಿತ:
ಶಿವಮೊಗ್ಗದಲ್ಲಿ ಸಾವರ್ಕರ್ ಪ್ಲೆಕ್ಸ್ ಗಲಾಟೆಯ ಬೆನ್ನಲ್ಲೇ ಓರ್ವನಿಗೆ ಚಾಕು ಇರಿದ ಘಟನೆ ಗಾಂಧಿ ಬಝಾರ್‌ನಲ್ಲಿ ನಡೆದಿದೆ. ಗಾಂಧಿ ಬಝಾರ್‌ನಲ್ಲಿದ್ದ ಪ್ರೇಮ್ ಸಿಂಗ್(20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ಲೆಕ್ಸ್ ತೆರವು ವಿಚಾರದಲ್ಲಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...