ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ

Source: Vb | By I.G. Bhatkali | Published on 2nd September 2022, 9:24 AM | State News |

ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದನ್ನು ವಿರೋಧಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದವು. ಇದೀಗ ಪೊಲೀಸರು ಮುರುಘಾ ಮಠಕ್ಕೆ ತೆರಳಿ, ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಬಳಿಕ ಚಿತ್ರದುರ್ಗದ ಡಿವೈಎಸ್ಪಿ ಕಚೇರಿಗೆ ಸ್ಥಳಾಂತರಿಸಿರುವುದಾಗಿ ತಿಳಿದುಬಂದಿದೆ.

ಇದಕ್ಕೂ ಮುನ್ನ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಕಾಯ್ದೆಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು 2ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದ್ದರು. 

ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾಶ್ರೀಗಳು ನಿರೀಕ್ಷಣಾ ಜಾಮೀನು ಅರ್ಜಿ ಸೆಪ್ಟೆಂಬರ್ 1 ರ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಮುರುಘಾಶ್ರೀಗೆ ಸಂಬಂಧಿಸಿದ ಸಿಡಿ ಮತ್ತು ದಾಖಲೆಗಳು ಅಪೂರ್ಣವಾಗಿರುವುದರಿಂದ ವಿಚಾರಣೆಯನ್ನು ಸೆಪ್ಟೆಂಬರ್ 2 ಶುಕ್ರವಾರಕ್ಕೆ ಮುಂದೂಡಲಾಗಿತ್ತು.

ಪೋಕ್ಸೋ ಕಾಯ್ದೆ 2012 ರನ್ವಯ ಮೈಸೂರಿನ ನಝರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ನಂತರ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸರು ಪೊಕ್ಕೊ ಕಾಯ್ದೆಗೆ ಸಂಬಂಧಿಸಿದಂತಹ ಸಿಡಿ ಮತ್ತು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿತ್ತು. ಆದರೆ ಪರಿಪೂರ್ಣವಾಗಿಲ್ಲದೇ ಇರುವುದರಿಂದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ್ದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದರು.

ಮಠದ ಆಡಳಿತಾಧಿಕಾರಿ ಬಸವರಾಜನ್ ದಂಪತಿಗೆ ಜಾಮೀನು: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿದ್ದ ಕಿರುಕುಳ, ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಬಸವರಾಜನ್ ಅವರು ಮುರುಘಾ ಮಠದ ಆಡಳಿತಾಧಿಕಾರಿ ಯಾಗಿದ್ದು, ಅವರ ಹಾಗೂ ಅವರ ಪತ್ನಿ ವಿರುದ್ಧ ಕಿರುಕುಳ ಹಾಗೂ ಬೆದರಿಕೆ ಆರೋಪ ಮಾಡಿ ಹಾಸ್ಟೆಲ್‌ನ ಮಹಿಳಾ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಬಸವರಾಜನ್‌ ವಜಾ: ಮುರುಘಾ ಮಠದ ಆಡಳಿತಾಧಿಕಾರಿ ಮಾಜಿ ಶಾಸಕ ಬಸವರಾಜನ್ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.

ಬಸವರಾಜನ್ ಅವರನ್ನು ಶ್ರೀ ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಗಳಿಂದ 26-08-2022ರಂದು ಬಿಡುಗಡೆಗೊಳಿಸಲಾಗಿದೆ ಎಂದು ಮುರುಘಾ ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಪ್ರಕಟನೆಯಲ್ಲಿ ತಿಳಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...