ಬೆಂಗಳೂರು: ಇಂದಿನಿಂದ ಎಸೆಸೆಲ್ಸಿ ಪರೀಕೆ; ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ

Source: VB News | By I.G. Bhatkali | Published on 19th July 2021, 9:55 AM | State News |

ಬೆಂಗಳೂರು: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಎರಡು ದಿನಕ್ಕೆ ಸೀಮಿತಗೊಳಿಸಿ ಎಸೆಸೆಲ್ಸಿ ಪರೀಕ್ಷೆ ಜು.19 ಹಾಗೂ 22ರಂದು ನಡೆಯಲಿದೆ.

ಜು.19, 22ರಂದು ಎರಡು ದಿನಗಳ ಕಾಲ ನಡೆಯಲಿರುವ ಪರೀಕ್ಷೆ ೧ ಪರೀಕ್ಷೆ ಬರೆಯಲಿರುವ 8,76,581 ವಿದ್ಯಾರ್ಥಿಗಳು • ಒಟ್ಟು 73,064 ಪರೀಕ್ಷಾ ಕೊಠಡಿಗಳು

ಕೋವಿಡ್ ಮಾರ್ಗಸೂಚಿಯನ್ವಯ ಎಸೆಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ ಪೂರ್ಣಗೊಂಡಿದ್ದು, ಕಳೆದ ಬಾರಿ 3,310 ಇದ್ದ ಪರೀಕ್ಷಾ ಕೇಂದ್ರಗಳನ್ನು 4,885ಕ್ಕೆ ಹಾಗೂ 48,000 ಪರೀಕ್ಷಾ ಕೊಠಡಿಗಳನ್ನು 73,064ಕ್ಕೆ ಹೆಚ್ಚಳ ಮಾಡಲಾಗಿದೆ. ಒಟ್ಟು 8.76ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆದಷ್ಟು ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ರವಿವಾರ ಬಿಡದಿಯ ಸರಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆರೋಗ್ಯ ಇಲಾಖೆ ನೀಡಿರುವ ಎಸ್‌ಒಪಿಯನ್ನು ಪಾಲಿಸಿ ಎಸೆಸೆಲ್ಸಿ ಪರೀಕ್ಷೆಯನ್ನು ಸರಳವಾಗಿ

ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಅತ್ಯಂತ ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.

ಬಿ.ಎಸ್.ಯಡಿಯೂರಪ್ಪ, ಸಿಎಂ

ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶಿಕ್ಷಣ ಇಲಾಖೆ ಜು.19ರಂದು ಪರೀಕ್ಷೆ ನಡೆಸಲು ಪೂರ್ಣವಾಗಿ ಸಜ್ಜಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆ ಯಲು ಯಾಗದಂತೆ ಯಾವುದೇ ತೊಂದರೆ ವ್ಯವಸ್ಥೆಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿ ಗಳಿಗೆ ಗೋಚರವಾಗುವ ರೀತಿ ಪ್ರದರ್ಶ ನವಾಗಬೇಕು.

ಈ ಬಾರಿ ಪರೀಕ್ಷೆ ಒಎಮ್‌ಆರ್ ಶೀಟ್‌ನಲ್ಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿ ರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ಸೂಚಿಸಿದರು.

ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ್ವರ, ಕೆಮ್ಮು, ನೆಗಡಿ ಅಂತಹ ಲಕ್ಷಣ ಕಂಡುಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಸುರಕ್ಷಾ ಕೇಂದ್ರ: ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಅವರು ಮನವಿ ಮಾಡಿದರು.

ಗ್ರಾಮೀಣ ಭಾಗದಿಂದ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಯಾವ ರೀತಿಯ ವಾಹನದ ವ್ಯವಸ್ಥೆ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಬರಲಿದ್ದಾರೆ ಎಂಬ ಮಾಹಿತಿಯನ್ನು ಮುಖ್ಯ ಶಿಕ್ಷಕರಿಂದ ಸಂಗ್ರಹಿಸಲಾಗಿದೆ. ಬೇಕಿರುವ ಕಡೆ ಹೆಚ್ಚಿನ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅವಶ್ಯಕವಿದ್ದಲ್ಲಿ ಸರಕಾರಿ ವಾಹನ, ಎಸ್‌ಡಿಎಂಸಿ ಅವರ ವಾಹನ ಸಹ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ರಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ಬೆಂಗಳೂರು: ಭ್ರಷ್ಟಾಚಾರ ಆರೋಪ ಬಿಎಸ್‌ವೈ, ವಿಜಯೇಂದ್ರ, ಆಪ್ತರಿಗೆ ಹೈಕೋರ್ಟ್ ನೋಟಿಸ್

ಭ್ರಷ್ಟಾಚಾರ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಮತ್ತು ಆಪ್ತರ ವಿರುದ್ಧ ದಾಖಲಿಸಿರುವ ...

ಬೆಂಗಳೂರು: ಇಂದು ನೂತನ ಸಚಿವರ ಪ್ರಮಾಣ ವಚನ ಮೊದಲ ಹಂತದಲ್ಲಿ 24 ಮಂದಿ ಸಂಪುಟ ಸೇರ್ಪಡೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ನೂತನ ಸಚಿವ ಸಂಪುಟ ರಚನೆಗೆ ಮುಹೂರ್ತ ನಿಗದಿಯಾಗಿದ್ದು, ಆ.4ರಂದು ಸಂಜೆ 5 ಗಂಟೆಗೆ ...

ಕೇರಳ ಮತ್ತು ಮಹಾರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ಕಡ್ಡಾಯ-ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಕೇರಳ ಮತ್ತು ಮಾಹಾರಾಷ್ಟ್ರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು ಹಿಂದಿನ 74 ಗಂಟೆಗಳ ಅವಧಿಯೊಳಗೆ ಪಡೆದಿರುವ ಕೋವಿಡ್ ...

ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಬಳಸಿ ಕಡಿಮೆ ವೆಚ್ಚದಲ್ಲಿ ಸುಧಾರಿತ ಕೃಷಿ ಮಾಡಿ ಆದಾಯ ಹೆಚ್ಚಿಸಿಕೊಳ್ಳಲು ರೈತರು ಶ್ರಮಿಸಬೇಕು : ಶಾಸಕ ಅಮೃತ ದೇಸಾಯಿ

ಧಾರವಾಡ : ರೈತರ ಕೃಷಿ ಉತ್ಪನ್ನಗಳನ್ನು ದ್ವಿಗುಣಗೊಳಿಸಿ ಆದಾಯ ಹೆಚ್ಚಿಸಲು ರಾಜ್ಯ ಸರ್ಕಾರವು ರೈತರಿಗೆ ಕೃಷಿ ಕಾರ್ಯಗಳಿಗಾಗಿ ಕಡಿಮೆ ...

ನರ್ಮ್ ಅಭಿಯಾನದ ಸಂಜೀವಿನಿ ಕಾರ್ಯಕ್ರಮವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂಜೀವಿನಿಯಾಗಿದೆ -ಜಿ.ಪಂ. ಸಿಇಓ ಡಾ.ಬಿ. ಸುಶೀಲಾ

ಧಾರವಾಡ : ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ (ನರ್ಮ್) ಅಭಿಯಾನದಡಿ ಆರಂಭಿಸಿರುವ ಸಂಜೀವಿನಿ ಕಾರ್ಯಕ್ರಮವು ಮಹಿಳೆಯರ ...