ಕಾರವಾರ: ಡಿಯುಡಿಸಿಗೆ ರಾಜ್ಯ ಪರಿಸರ ಪ್ರಶಸ್ತಿ

Source: S O News Service | By I.G. Bhatkali | Published on 4th June 2019, 8:14 PM | Coastal News | State News |

ಕಾರವಾರ: ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶ ಕರ್ನಾಟಕ ಸರ್ಕಾರ ನೀಡುವ 2018-19ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಭಾಜನವಾಗಿದೆ.

ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದ್ದು ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿಯನ್ನು ಒಳಗೊಂಡಿದೆ.

ವ್ಯವಸ್ಥಾಪನಾ ಸಂಸ್ಥೆಗಳ ಪೈಕಿ ಸರ್ಕಾರಿ ವಲಯ, ಸರ್ಕಾರೇತರ  ಸಂಸ್ಥೆ, ಕಂಪನಿ, ಟ್ರಸ್ಟ್, ಇತರೆ ವಲಯದಿಂದ ಪ್ರಶಸ್ತಿಗೆ ಶಿಫಾರಸು ಮಾಡಲು ಸರ್ಕಾರದ ಜೀವಿಪರಿಸ್ಥಿತಿ ಮತ್ತು ಪರಿಸರ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು 2018-19ನೇ ಸಾಲಿನ ಪ್ರಶಸ್ತಿ ಆಯ್ಕೆಗೆ ರಾಜ್ಯಾದ್ಯಂತ ಆಹ್ವಾನಿಸಲಾದ ಅರ್ಜಿಗಳ ಪರಿಶೀಲನೆ ನಡೆಸಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸಂಸ್ಥೆಗಳ ವಿಭಾಗದಲ್ಲಿ ಬೆಂಗಳೂರು ನಗರ ಸುಲ್ತಾನಪಾಳ್ಯದ ಸಹಜ  ಸಮೃದ್ಧ, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಕೊಪ್ಪಳ ಜಿಲ್ಲೆಯ ಕೊಪ್ಪಳ ನಗರಸಭೆ ಪ್ರಶಸ್ತಿಗೆ ಆಯ್ಕೆಯಾಗಿವೆ.

ವ್ಯಕ್ತಿಗಳ ವಿಭಾಗದಲ್ಲಿ ಬೆಂಗಳೂರು ನಗರ ಚಂದ್ರಲೇಔಟ್‍ನ ಕೆಂಪಸಿದ್ದೇಗೌಡ, ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ತಲಕಾಡು ಗ್ರಾಮ ಪಂಚಾಯ್ತಿ ಸದಸ್ಯ ಡಾ.ತಿಪ್ಪೇಕಾಳಿ ರಂಗನಾಥ್ ಹಾಗೂ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕು ಇಂದೂರ ಪರಿಸರ ಪ್ರೇಮಿ ಬಸವರಾಜ್ ಬಸಪ್ಪ ಇವರು ಪ್ರಶಸ್ತಿಗಾಗಿ ಆಯ್ಕೆಯಾಗಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...