ಕೊರೋನಾ ಆರ್ಭಟಕ್ಕೆ ಕರ್ನಾಟಕ ತತ್ತರ: ಇಂದು 98 ಬಲಿ, ಬೆಂಗಳೂರಿನಲ್ಲಿ 1,852 ಸೇರಿ 5,172 ಮಂದಿಗೆ ಪಾಸಿಟಿವ್!

Source: uni | Published on 2nd August 2020, 12:13 AM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶನಿವಾರ 5,172 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 5,172 ಹೊಸ ಪ್ರಕರಣಗಳು ವರದಿಯಾಗಿದ್ದು, 98 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 3,860 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 53,648 ಮಂದಿ ಗುಣಮುಖರಾಗಿದ್ದಾರೆ. 
ರಾಜ್ಯದಲ್ಲಿ ಇದುವರೆಗೆ ಒಟ್ಟು 2,412 ಮಂದಿ ಸಾವನ್ನಪ್ಪಿದ್ದು, 73,219 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 1,852 ಹೊಸ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ನಗರದಲ್ಲಿ ಇಂದು 27 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ ಒಟ್ಟು 34,760 ರ್ಯಾಪಿಡ್ ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳ ಒಟ್ಟು ಸಂಖ್ಯೆ 13,85,552ಕ್ಕೆ ಏರಿಕೆಯಾಗಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...