ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ; ಮುಖ್ಯಮಂತ್ರಿ

Source: Vb | By I.G. Bhatkali | Published on 20th June 2023, 7:40 AM | State News |

ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸುಮರ್ಸ್ ಫೆಡರೇಷನ್ (ಎನ್‌ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಬರಲ್ ಕೋ- ಆಪರೇಟಿವ್ ಮಾರ್ಕೆಟಿಂಗ್ ಫೆಡರೇ ಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರಕಾರಕ್ಕೆ ಸೇರಿದ್ದು, ಈ ಸಂಸ್ಥೆಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಆಹಾರ ಮಂಡಳಿ (ಎಫ್‌ಸಿಐ)ಯಿಂದ ಒಂದು ಕೆ.ಜಿ. ಅಕ್ಕಿಗೆ 34 ರೂ. ಮತ್ತು 2.60 ರೂ, ಸಾಗಣೆ ವೆಚ್ಚ ಸೇರಿ ಒಟ್ಟು 36.40 ರೂ.ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ರಾಗಿ, ಜೋಳ 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಪಂಜಾಬ್ ಸರಕಾರದೊಂದಿಗೆ ಚರ್ಚೆ: ಪಂಜಾಬ್ ಸರಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ಧವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರಕಾರ ಅಣ್ಣಭಾಗ್ಯ ಯೋಜನೆಯನ್ನು ಖಂಡಿತ ಚಾಲನೆ ಗೊಳಿಸಲಿದೆ.

ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಿ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದು ಅವರು ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...