ಚಿಲುಮೆ ಹಗರಣ; ಒಕ್ಕಲಿಗ ಮತದಾರರಿಗೆ ಕತ್ತರಿ; ಡಿಕೆಶಿ ಆರೋಪ

Source: Vb | By I.G. Bhatkali | Published on 27th November 2022, 10:52 AM | State News |

ಬೆಂಗಳೂರು: ಮತದಾರರ ಪಟ್ಟಿ ಯಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರು, ಪರಿಶಿಷ್ಟರ ಮತಗಳನ್ನು ತೆಗೆದು ಹಾಕಲಾಗುತ್ತಿದೆ. ಆರ್.ಅರ್. ನಗರದಲ್ಲಿ 'ಗೌಡ' ಎಂಬ ಉಪನಾಮ ಇರುವ ಪ್ರತಿ 5 ಹೆಸರುಗಳಲ್ಲಿ ಎರಡನ್ನು ಉಳಿಸಿಕೊಂಡು ಇತರ ಮೂರು ಹೆಸರುಗಳನ್ನು ತೆಗೆದು ಹಾಕುತ್ತಾರೆ. ಇದರಲ್ಲಿ ಮಂತ್ರಿ, ಶಾಸಕರ ಕೈವಾಡವೂ ಇದೆ. ಇದಕ್ಕೆ ಸಂಬಂಧಿಸಿದ ಶಾಸಕರ ಪತ್ರಗಳು ಚಿಲುಮೆ ಸಂಸ್ಥೆಯ ಕಚೇರಿಯಲ್ಲಿ ಸಿಕ್ಕಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. 

ಶನಿವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಹೇಳಿದ್ದಾರೆ. ಅವರು ಕೇಸು ಹಾಕಲಿ, ಮತದಾರರ ಮಾಹಿತಿ ಕಳವು ವಿಚಾರವಾಗಿ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮೇಲಿನವರ ಆದೇಶದ ಮೇರೆಗೆ ನಾವು ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದರು. ಈ ಆದೇಶ ಕೊಟ್ಟವರು ಯಾರು ಎಂಬುದು ಗೊತ್ತಾಗಬೇಕು. ಈ ಬಗ್ಗೆ ಬಿಬಿಎಂಪಿ ತನಿಖೆ ನಡೆಸಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಅಥವಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು. ಅವರ ಉಸ್ತುವಾರಿಯಲ್ಲೇ ಚುನಾವಣೆ ನಡೆಸಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಯಾವುದೇ ಮತವನ್ನು ಸೇರ್ಪಡೆ ಮಾಡುವಾಗ ಅಥವಾ ತೆಗೆಯುವಾಗ ಆಯಾ ವ್ಯಕ್ತಿಯ ಅರ್ಜಿ ಇರಬೇಕು. ಬಿಎಲ್‌ಒಗಳನ್ನು ಯಾರು ನೇಮಕ ಮಾಡಿದ್ದರು? ಈ ಬಿಎಲ್‌ಒಗಳನ್ನು ಎಲ್ಲ 28 ಕ್ಷೇತ್ರಗಳ ಚುನಾವಣಾಧಿಕಾರಿಗಳೂ ಮಾಡಿದ್ದಾರೆ. 6-7 ಸಾವಿರ ಮಂದಿಗೆ ಬಿಎಲ್‌ಒ ಗುರುತಿನ ಚೀಟಿ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ಇದರಲ್ಲಿ ಕೆಲವರು ಅಮಾಯಕರಿದ್ದು, ಕೆಲಸಕ್ಕೆ ಎಂದು ಸೇರಿದ್ದಾರೆ. ಆದರೆ ಇದರ ಮೂಲ ಕಿಂಗ್ ಪಿನ್ ಆಗಿ ಸರಕಾರದ ಸಚಿವರು, ಶಾಸಕರಿಲ್ಲದೇ ಈ ಅಕ್ರಮ ನಡೆಯಲು ಸಾಧ್ಯವಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಈ ಅಕ್ರಮ ನಡೆದಿದೆ. ಈ ಎಲ್ಲ ಕಡೆ ತನಿಖೆ ಆಗಬೇಕು. ಇಲ್ಲೆಲ್ಲ ಮತದಾರರ ಪಟ್ಟಿ ಮರುಪರಿಷ್ಕರಣೆ ಆಗಬೇಕು ಎಂದು ಶಿವಕುಮಾರ್‌ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡಲು ವ್ಯಕ್ತಿ ಸತ್ತಿದ್ದರೂ ಪ್ರಮಾಣ ಪತ್ರ ನೀಡಿಲ್ಲ ಎಂದರೆ ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿ ಪರಿಶೀಲಿಸಬೇಕು. ಮನೆ ಬದಲಾವಣೆ ಮಾಡಿದ್ದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಬೇಕು ಎಂದು ಅವರು ಹೇಳಿದರು.

ಆದರೆ ಇವರು ಯಾವುದೋ ಸಂಸ್ಥೆ, ಶಾಸಕರು ಹಾಗೂ ಸಚಿವರ ಕಚೇರಿಯಲ್ಲಿ ಕೂತು ಅವರಿಗೆ ಬೇಕಾದಂತೆ ಕೆಲಸ ಮಾಡಿದ್ದಾರೆ. ಇದರ ಹಿಂದೆ ದೊಡ್ಡ ಸಂಚೇ ಇದೆ. ಕೇಂದ್ರ ಸರಕಾರದ ಸಂಸ್ಥೆ ಮೂಲಕ ಖಾಸಗಿ ರೈತರ ಖಾತೆಗೆ ಲಕ್ಷಗಟ್ಟಲೆ ಹಣ ಹೇಗೆ ವರ್ಗಾವಣೆ ಆಯಿತು? ಯಾವ ಕಾರಣಕ್ಕೆ ಹಣ ನೀಡಲಾಗಿದೆ? ಈ ಬಗ್ಗೆ ತನಿಖೆ ಆಗಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಮಂತ್ರಿಯೊಬ್ಬರು ಆರಂಭದಲ್ಲಿ ನನಗೆ ಈ ಸಂಸ್ಥೆ ಗೊತ್ತೇ ಇಲ್ಲ ಎಂದರು. ನಂತರ ಈ ಸಂಸ್ಥೆ ಗೊತ್ತಿದೆ, ಆದರೆ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಹೇಳಿದರು. ಸಚಿವರು ಹಾಗೂ ಈ ಸಂಸ್ಥೆಯ ನಿರ್ದೇಶಕರ ಮಧ್ಯೆ ದೂರವಾಣಿ ಮಾತುಕತೆ ಎಲ್ಲವೂ ಇದೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಸತ್ಯಾಂಶ ಹೊರಬರಲಿ ಎಂದು ಅವರು ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...