ಕಾರವಾರ: ಜೂ 22-23ರಂದು ವಿಜ್ಞಾನ ಮತ್ತು ಗಣಿತ ಶಿಕ್ಷಕರಿಗಾಗಿ ಎರಡು ದಿನಗಳ ತರಬೇತಿ ಕಾರ್ಯಾಗಾರ

Source: varthabhavan | By Arshad Koppa | Published on 22nd June 2017, 6:35 AM | State News | Guest Editorial |

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಬೆಂಗಳೂರು, ಇವರ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ದಿನಾಂಕ 22 ಮತ್ತು 23ನೇ ಜೂನ್ 2017 ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ, ಕಾರವಾರದಲ್ಲಿ ಹಮ್ಮಿಕೊಂಡಿದೆ.    
ರಾಜ್ಯದಾದ್ಯಂತ ವ್ಯಾಪಕವಾಗಿ ಚರ್ಚಿಸಲ್ಪಟುತ್ತಿರುವ ನವೀಕೃತ 9ನೇ ತರಗತಿಯ ಪಠ್ಯಕ್ರಮದ ಸಮಸ್ಯೆಗಳನ್ನು ಚರ್ಚಿಸಿ ಅದರಲ್ಲಿ ಕಂಡುಬರುವ ತಪ್ಪುಗಳನ್ನು ಸರಿಪಡಿಸುವದು ಈ ತರಬೇತಿಯ ಉದ್ದೇಶವಾಗಿದೆ. ಈಗಾಗಲೇ ಜಿಲ್ಲೆಯಿಂದ ರಾಜ್ಯಮಟ್ಟದಲ್ಲಿ ತರಬೇತಿ ಪಡೆದಿರುವ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಶಿಕ್ಷಕರಿಗೆ ಮಾಹಿತಿ ನೀಡಲಿದ್ದಾರೆ.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಿನಾಂಕ 22.06.2017 ರಂದು ಬೆಳಿಗ್ಗೆ 10ಗಂಟೆಗೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಶ್ರೀ. ಪಿ.ಕೆ.ಪ್ರಕಾಶ ಇವರು ನೆರವೇರಿಸಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರಿಸರ ಅಧಿಕಾರಿಗಳು, ಶಿವಾಜಿ ಮಹಾವಿದ್ಯಾಲಯದ ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ. ಇದಲ್ಲದೇ ವಿಕಲಾಂಗ ಚೇತನರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಇರುವ ಸೌಲಭ್ಯಗಳ ಕುರಿತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶ್ರೀ. ಗಂಗಪ್ಪ ಮಾಹಿತಿ ನೀಡಲಿದ್ದಾರೆ. ನಿಯೋಜಿತ ಎಲ್ಲಾ ಶಿಕ್ಷಕರು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಹಾಜರಿದ್ದು ಈ ಕಾರ್ಯಾಗಾರದ ಲಾಭ ಪಡೆಯಬೇಕಾಗಿ ಸಂಘಟಕರ ಪರವಾಗಿ ಡಾ. ವಿ.ಎನ್.ನಾಯಕ ರವರು ಕೋರಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...