ಸೆ.15 ರೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು; ಅಧಿಕಾರಿಗಳಿಗೆ ಪಂಚಾಯತ್ ಆಡಳಿತಾಧಿಕಾರಿ ಸೋಮಶೇಖರ ಮೇಸ್ತ ಸೂಚನೆ

Source: S O News | By I.G. Bhatkali | Published on 29th August 2022, 7:56 PM | Coastal News |

ಕಾರವಾರ: ತಾಲೂಕಾ ಪಂಚಾಯತ್ 15 ನೇ ಹಣಕಾಸು ಯೋಜನೆಯಡಿ 45 ಕಾಮಗಾರಿಗಳಲ್ಲಿ 38 ಕಾಮಗಾರಿಗಳು ಪ್ರಗತಿಯಲಿದ್ದು ಸೆ.15 ರೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಾರವಾರ ತಾಲೂಕಾ ಪಂಚಾಯತ್ ಆಡಳಿತಾಧಿಕಾರಿ ಸೋಮಶೇಖರ ಮೇಸ್ತ  ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಾ ಪಂಚಾಯತ್ ಸಭಾಭವನದಲ್ಲಿ  ಸೋಮವಾರದಂದು ನಡೆದ ಮಾಸಿಕ ಪ್ರಗತಿ ಪರಿಶೀಲನಾ  ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲಾ ಶೌಚಾಲಯಗಳ  ಹಾಗೂ ಶಾಲಾ ಕಂಪೌಂಡಗಳ ಕಾಮಗಾರಿಗಳನ್ನು ಪರಿಶೀಲಿಸಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. 

ತಾಲೂಕಾ ಸಮಾಜ ಕಲ್ಯಾಣ ಇಲಾಖೆಯಡಿ ಪ್ರಸುತ್ತ ಸಾಲಿನಲ್ಲಿ  ವಿದ್ಯಾರ್ಥಿ ವೇತನಕ್ಕಾಗಿ ಒಟ್ಟು 415 ಅರ್ಜಿಗಳಲ್ಲಿ 412 ಅರ್ಜಿಗಳು ಅನುಮೊದನೆಗೊಂಡಿದ್ದು, 3 ಅರ್ಜಿಗಳು ಆಧಾರ ಸಿಡಿಂಗ್ ಆಗದೆ ಇದ್ದರಿಂದ ಬಾಕಿ ಉಳಿದಿದ್ದು, ಕೂಡಲೇ ಅನುಮೊದನೆ ಮಾಡಲಾಗುವುದು ಎಂದು ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳು ವರದಿ ನೀಡಿದರು  ಹಾಗೂ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕುರಿತು  ಕೋವಿಡ್  ಮುಂಜಾಗೃತ ಕ್ರಮ ಕೈಗೊಳ್ಳಬೇಕು ಮತ್ತು  ವಸತಿ ನಿಲಯಗಳಲ್ಲಿ ವಾಶಿಂಗ್ ಮಷಿನ್‍ಗಳ ಅವಶ್ಯಕತೆ ಇದ್ದಲ್ಲಿ ಅರ್ಜಿ ನೀಡಿ ಎಂದು ಸೂಚನೆ ನೀಡಿದರು. 

ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ನೀಡಬೇಕಾದ ಅಕ್ಕಿಯನ್ನು ಹಣ ತೆಗೆದುಕೊಂಡು  ಮಾರಾಟ ಮಾಡಲಾಗುತ್ತಿದೆಯೇ  ಎಂದು ಪರಿಶೀಲನೆ ನಡೆಸಿ ಅಂತಹವರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಅಕ್ಷರ ದಾಸೋಹ ಇಲಾಖೆಯವರು ಶಾಲಾ ಮಕ್ಕಳಿಗೆ ಹಾಲು ಮೊಟ್ಟೆ ಸರಿಯಾಗಿ ವಿತರಣೆಯಾಗುತ್ತಿದೆಯೇ ಪರಿಶೀಲನೆ ನಡೆಸಬೇಕು ಎಂದು ಹೇಳಿದರು..
ತಾಲೂಕಿನಲ್ಲಿ ಕಳೆದ ವರ್ಷದಿಂದ ಭತ್ತ ಬೆಳೆಗಾರಿಕೆ  ಕಡಿಮೆಯಾಗಿದ್ದು, ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಹಾಗೂ ಭತ್ತದ ಬೇಳೆ ಕುರಿತು ಮನವರಿಕೆ ಮಡಲು ಇಲಾಖೆ ಅಧಿಕಾರಿಗಳನ್ನು ನೇಮಿಸಿ ರೈತರಿಗೆ ಮಾಹಿತಿ ನೀಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಇಲಾಖೆಯ ಗೋಪಿಶೇಟ್ಟಾ ವಲಯದ ವತಿಯಿಂದ ರೈತರಿಗೆ ಹಣ್ಣಿನ ಸಸಿಗಳನ್ನು ವಿತರಣೆ ಮಾಡಲಾಗುತ್ತದೆ ಹಾಗೂ ಇಲಾಖೆಯಡಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ 10 ಫಲಾನುಭವಿಗಳಿಗೆ ಗ್ಯಾಸ ಒಲೆ ವಿತರಣೆ ಮಾಡಲಾಗಿದೆ, ನಿರ್ಮಿತಿ ಕೇಂದ್ರದಿಂದ ಅಂಗನವಾಡಿ ಕೇಂದ್ರಗಳಿಗೆ ಫ್ಯಾನ, 2 ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇಲಾಖೆಗಳ ಪ್ರಗತಿ ಕುರಿತು ವರದಿ ನೀಡಿದರು. 
ಪ್ರಗತಿ ಪರೀಶೀಲನೆ ಸಭೆಗೆ ಹಾಜರಾಗದೆ ಇರುವ ಇತರೆ ಇಲಾಖೆ ಅಧಿಕಾರಿಗಳು ಹಾಜರಾಗದೆ ಇರುವುದಕ್ಕೆ ಸೂಕ್ತ ಕಾರಣ ತಿಳಿಸಬೇಕು ಹಾಗೂ ಮುಂದಿನ ಸಭೆಯಲ್ಲಿ ತಪ್ಪದೆ ಮಾಸಿಕ ಪ್ರಗತಿಗಳ ಕುರಿತು ಸರಿಯಾದ ಮಾಹಿತಿ ಸಮೇತ ಹಾಜರಾಗಬೇಕು ಎಂದು ಸೂಚನೆ ನೀಡಿದರು. 

ಸಭೆಯಲ್ಲಿ ಕಾರವಾರ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಲಪ್ಪನವರ ಆನಂದಕುಮಾರ ಹಾಗೂ  ತಾಲೂಕಾ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಉತ್ತಮವಾದ ಯೋಜನೆ

ಕಾರವಾರ  : ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ...

ಜಿಲ್ಲೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ರಾಷ್ಟ್ರಕ್ಕೆ ವಿಸ್ತರಣೆಯಾಗಬೇಕು : ಸಚಿವ ಸುನೀಲ್

1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ ಅಭಿವೃದ್ದಿಗೆ ಹೋಲಿಸಿದಲ್ಲಿ, ಉಡುಪಿ ಜಿಲ್ಲೆ 20 ವರ್ಷ ಮುಂದಿದ್ದು, ಸ್ಟಾರ್ಟಪ್ ...