ಕಾರವಾರ: ದೀಪಾವಳಿ ಹಬ್ಬವನ್ನು ಬೆಳಕಿನ ಹಬ್ಬವಾಗಿ ಪರಿಸರ ಸ್ನೇಹಿಯಾಗಿ ಆಚರಿಸಿ; ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

Source: S O News | By I.G. Bhatkali | Published on 10th November 2023, 7:45 PM | Coastal News |

ಕಾರವಾರ:  ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿರ್ಬಂಧ ವಿಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.

ಪ್ರತಿ ವರ್ಷವು ದೀಪಾವಳಿ ಹಬ್ಬವನ್ನು ಸಂಪ್ರಾದಾಯಿಕವಾಗಿ ದೇಶದಾದ್ಯಂತ ಆಚರಿಸುವುದು ತಮಗೆ ತಿಳಿದ ಸಂಗತಿ ಈ ಹಿಂದೆ ದೀಪಾವಳಿ ಹಬ್ಬವನ್ನು ದೀಪಗಳ ಸಾಲಿನ ಮೂಲಕ ಆಚರಿಸಿ ಮನಸ್ಸಿನ ಕತ್ತಲನ್ನು ಹೊರದೂಡಿ ಬೆಳಕಿನಡೆಗೆ ಸಾಗುವ ಸಂದೇಶವನ್ನು ಸಾರುವುದು ಸಾಮಾನ್ಯವಾಗಿತ್ತು. 

ಈ ಬಾರಿಯ ದೀಪಾವಳಿಯ ಹಬ್ಬವನ್ನು ಆದಷ್ಟು ದೀಪಗಳನ್ನು ಬೆಳಗಿಸಿ ಸಂಭ್ರಮಿಸೋಣ. ಮಾಲಿನ್ಯರಹಿತ ದೀಪಾವಳಿ ಹಬ್ಬ ಆಚರಿಸೋಣ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಷೇಧಿತ ಪಟಾಕಿಗಳನ್ನು ಸಿಡಿಸಬೇಡಿ. ನಿಷೇಧಿತ ಪಟಾಕಿ ಸಿಡಿಸಿದರೆ ಶಬ್ಧ ಮಾಲಿನ್ಯ, ವಾಯು ಮಾಲಿನ್ಯ ಹಾಗೂ ಘನತ್ಯಾಜ್ಯ ಉತ್ಪಾದನೆಯಾಗಿ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. 

ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು. ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದೆ. 

ರಾಷ್ಟೀಯ ಹಸಿರು ಪ್ರಾಧಿಕಾರದ ಆದೇಶದಂತೆ ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR  (Council of Scientific & Industrial Research ) & NEERI (National Environmental Engineering Research Institute)  ಚಿಹ್ನೆ ಮತ್ತು ಕ್ಯೂಆರ್ ಕೋಡ್‍ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಉಪಯೋಗಿಸಲು ಅವಕಾಶ ಇರುತ್ತದೆ. ರಾತ್ರಿ 8 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶವಿರುತ್ತದೆ. 10 ಗಂಟೆಯ ನಂತರ ಪಟಾಕಿ ಸಿಡಿಸಬಾರದಾಗಿ ತಿಳಿಸಲಾಗಿದೆ ಹಾಗೂ ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ (ಹಾಸ್ಟೆಲ್), ವೃದ್ಧರ ಅನಾಥಾಶ್ರಮ, ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಿಡಿಮದ್ದುಗಳನ್ನು ಸಿಡಿsಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿತದಿಂದ ಬರುವ ಹೊಗೆ ಅಸ್ತಮಾ ರೋಗಿಗಳು ಹೃದ್ರೋಗಿಗಳು, ವಯೋವೃದ್ಧರು, ಚಿಕ್ಕ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತದೆ.    

ಜಿಲ್ಲೆಯ ಸಮಸ್ತ ನಾಗರಿಕರು, ದೀಪಗಳನ್ನು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವಂತೆ ಪ್ರಾದೇಶಿಕ ಕಛೇರಿ, ಕಾರವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಣೆ ತಿಳಿಸಿದೆ. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...