ಕಾರವಾರ: ಚುನಾವಣೆ ಅಧಿಸೂಚನೆ ಪ್ರಕಟಣೆ 

Source: varthabhavan | By Arshad Koppa | Published on 3rd August 2017, 8:00 AM | Coastal News | Guest Editorial |

ಕಾರವಾರ ಆಗಸ್ಟ 2 : ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
 ಆಗಸ್ಟ 14 ನಾಮ ಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆ. 16 ರಂದು ನಾಮಪ್ರಗಳನ್ನು ಪರಿಶೀಲಿಸಲಾಗುವದು. ಆ. 19 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಆಗಸ್ಟ 23 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಆಗಸ್ಟ 23 ರಂದು ಮತ ಎಣ ಕೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿ0ಗ್ ತರಬೇತಿಗಾಗಿ ಅರ್ಜಿ ಆಹ್ವಾನ   
  ಕಾರವಾರ ಆಗಸ್ಟ 2 :  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ   ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ  ಮತ್ತು ಅಲೆಮಾರಿ ಜನಾಂಗದಲ್ಲಿ ಬರುವ ಅಭ್ಯರ್ಥಿಗಳಿಗೆ  6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿ0ಗ್ ತರಬೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 
  ಅರ್ಜಿದಾರರು 18ರಿಂದ 35ರ ವಯೋಮಿತಿಯೊಳಗಿದ್ದು ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕ್ಕಿಂತ ಕಡಿಮೆ ಇರುವ ಅಭ್ಯರ್ಥಿಗಳು ತಮ್ಮಕೈ ಬರಹದ ಅರ್ಜಿಯೊಂದಿಗೆ  ಎಸ್.ಎಸ್.ಎಲ್.ಸಿ/ ಪಿ.ಯು.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗು ಶಾಲಾ ಟಿ.ಸಿ. ಯೊಂದಿಗೆ ಆಗಸ್ಟ 21 ರ  ಒಳಗೆ  ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಸಿಂ ಮಂಜಿಲ್ , ಹೈ ಚರ್ಚ ಹತ್ತಿರ, ಕಾರವಾರ  ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂ. 08382-223229 ಸಂಪರ್ಕಿಸಬಹುದು.     
        

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...