ಕಾರವಾರ:ದೀಪಾವಳಿ ಹಬ್ಬ ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

Source: varthabhavan | By Arshad Koppa | Published on 18th October 2017, 8:02 AM | Coastal News | Special Report |

ಕಾರವಾರ ಅಕ್ಟೋಬರ್ 17:   ಅಕ್ಟೋಬರ್ 18 ರಿಂದ 20 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. 
          ಈ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ, ಧ್ವನಿವರ್ಧಕ ಬಳಸುವುದು ಅಥವಾ ಇನ್ನಿತರ ಸಲಕರಣೆಗಳಿಂದ ಶಬ್ದ ಮಾಡುವುದು ತಡೆಗಟ್ಟುವ ಕಾನೂನು ಅನುಷ್ಠಾನಗೊಳಿಸುವದರೊಂದಿಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.

  
         ಹಬ್ಬದ ಆಚರಣೆಯಲ್ಲಿ ದೀಪಗಳ ಬಳಕೆ ಪ್ರಧಾನವಾಗಿರಲಿ. ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ  ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. 125 ಡೆಸಿಬಲ್ಸ್‍ಗಳಿಗಿಂತ ಹೆಚ್ಚು ಶಬ್ದ ಉಂಟು ಮಾಡುವ ಪಟಾಕಿಗಳನ್ನು ದಾಸ್ತಾನು / ಮಾರಾಟ ಮಾಡುವುದನ್ನು ಮತ್ತು ಈ ತರಹದ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಪರಿಸರ (ಸಂರಕ್ಷಣೆ) (ಎರಡನೆಯ ತಿದ್ದುಪಡಿ) ನಿಯಮಾವಳಿಗಳು, 1999 ರ ಅನ್ವಯ 125 ಡಿಬಿ (ಎ) ಗಿಂತ (4 ಮೀಟರ್ ಅಂತರದಲ್ಲಿ) ಹೆಚ್ಚು ಶಬ್ಧ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದಾಗಲೀ ಅಥವಾ ಉಪಯೋಗಿಸುವುದನ್ನಾಗಲೀ ಕಟ್ಟನಿಟ್ಟಾಗಿ ನಿಷೇಧಿಸಲಾಗಿದೆ.  ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಅಥವಾ ಸಿಡಿಮದ್ದುಗಳನ್ನು ಬಳಸುವಂತಿಲ್ಲ. ಪಟಾಕಿಗಳು ಹೊರಸೂಸುವ ವಿಷಯುಕ್ತ ಅನಿಲ ಆರೋಗ್ಯ ಸಂಬಂಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದರಿಂದ ಪಟಾಕಿಗಳ ಸಿಡಿತವನ್ನು ಕಡಿಮೆಗೊಳಿಸುವುದು. ಹಬ್ಬದ ಸಮಯದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಜೈವಿಕ ವಿಘಟನೆಯಾಗುವ ಪದಾರ್ಥಗಳನ್ನು ಮರು ಬಳಕೆ ಮತ್ತು ಗೊಬ್ಬರ ತಯಾರಿಕೆಗೆ ಹಾಗೂ ಇತರೆ ಜೈವಿಕ ವಿಘಟನೆಯಾಗದ ಪದಾರ್ಥಗಳನ್ನು ವ್ಶೆಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. 
         ಮೇಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘಿಸುವವರು ಉಪಯೋಗಿಸುತ್ತಿರುವ ಧ್ವನಿವರ್ಧಕ ಹಾಗೂ ಇನ್ನಿತರ ಸಲಕರಣೆಗಳನ್ನು ಜಪ್ತು ಮಾಡಿ, ಪರಿಸರ (ಸಂರಕ್ಷಣೆ) ಕಾಯ್ದೆ, 1986 ರ ಅಡಿಯಲ್ಲಿ ಕಾನೂನು ರೀತ್ಯಾ ಕ್ರಮವನ್ನು ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...