ಪೌರಕಾರ್ಮಿಕರಿಗೆ ನ್ಯಾಯ ಒದಗಿಸುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ: ಸಚಿವೆ ಶಶಿಕಲಾ ಜೊಲ್ಲೆ

Source: sonews | By Staff Correspondent | Published on 24th October 2019, 11:19 PM | Coastal News | Don't Miss |

ಕಾರವಾರ: ಪೌರಕಾರ್ಮಿಕರಿಗೆ ನ್ಯಾಯ ಒದಗಿಸುವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು,  ನಮ್ಮ ನಗರ, ಓಣಿಯ ಸ್ವಚ್ಚತೆಗಾಗಿ ದುಡಿಯುವ ಪೌರಕಾರ್ಮಿಕರ  ಕಟ್ಟಡವನ್ನು ಉದ್ಘಾಟನೆ ಮಾಡುವ ಸೌಭಾಗ್ಯ ತಮಗೆ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. 

ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ, ಕಾರವಾರದ ಪಂಚರಿಷಿವಾಡದಲ್ಲಿ ಪೌರಕಾರ್ಮಿಕರಿಗಾಗಿ ನಿರ್ಮಿಸಿದ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದ ಅವರು ದೇಶದಲ್ಲಿ ಯಾವ ವ್ಯಕ್ತಿಯೂ ಸ್ವಂತ ಸೂರು ಇಲ್ಲದೇ ದುಃಖದಲ್ಲಿ ಬದುಕಬಾರದು. ವಿವಿಧ ಯೋಜನೆಗಳ ಅಡಿ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಲ್ಲರೂ ಉತ್ತಮ ಮನೆಗಳನ್ನು ಹೊಂದುವಂತಾಗಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಆಧಿಕಾರಿಗಳು, ಶಾಸಕರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕಿ ರೂಪಾಲಿ.ಎಸ್.ನಾಯ್ಕ್ ಸ್ವಚ್ಛತೆಯನ್ನು ಕಾಪಾಡುವ ಪೌರಕಾರ್ಮಿಕರ ಕನಸು ನನಸಾಗಿದೆ. ಅವರಿಗೆ ಸರ್ಕಾರದಿಂದ ಇನ್ನೂ ಹೆಚ್ಚಿನ ಸೌಲಭ್ಯಗಳು ದೊರೆಯಬೇಕು. ಕೀಳರಿಮೆಯ ಭಾವನೆಗಳನ್ನು ತೊರೆದು ಅವರನ್ನು ಗೌರವದಿಂದ ಕಾಣುವ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು.  ಪೌರಕಾರ್ಮಿಕರಿಲ್ಲದಿದ್ದರೆ ಸ್ವಚ್ಛತೆಯಿಲ್ಲ ಹಾಗಾಗಿ ಎಲ್ಲಿಯೂ ಅವರ ವ್ಯಕ್ತಿತ್ವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಬೇಕು ಎಂದರು. 

ನಗರಸಭಾ ಪೌರಾಯುಕ್ತರಾದ ಎಸ್.ಯೋಗೇಶ್ವರ್ ಮಾತನಾಡಿ ಪೌರಕಾರ್ಮಿಕರ ಆಯ್ಕೆ ಪ್ರಕ್ರಿಯೆ ನಡೆಸಿ ಮೊದಲ ಹಂತದಲ್ಲಿ 16 ವಸತಿಗೃಹಗಳನ್ನು ಒಟ್ಟೂ 180 ಲಕ್ಷ ರೂ. ಗಳಲ್ಲಿ ನಿರ್ಮಿಸಿದ್ದೇವೆ. ಪ್ರತಿ ವಸತಿ ಗೃಹದ ವೆಚ್ಛ 11.25 ಲಕ್ಷ ರೂ. ಆಗಿರುತ್ತದೆ. ಮುಂದಿನ ಹಂತಗಳಲ್ಲಿ ಇನ್ನೂ ಹೆಚ್ಚಿನ ಮನೆಗಳನ್ನು ನಿರ್ಮಿಸಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್.ಕೆ, ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಹಾಗೂ ನಗರಸಭಾ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಮಗಾರಿಯ ಗುತ್ತಿಗೆದಾರರಾದ ಶಿವಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...