ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿರಲಿ : ರಿತೀಶ್ ಕುಮಾರ್ ಸಿಂಗ್

Source: S O News | By I.G. Bhatkali | Published on 23rd November 2023, 7:45 PM | Coastal News |

ಕಾರವಾರ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ, ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪಗಳು ಉಂಟಾಗದAತೆ ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿರುವಂತೆ ಸಿದ್ದಪಡಿಸುವಂತೆ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರ ಪಟ್ಟಿಗೆ ಸೇರ್ಪಡೆ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡುವಂತೆ ತಿಳಿಸಿದ ಅವರು, ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡುವಾಗ ಮತ್ತು ಹೆಸರುಗಳನ್ನು ತೆಗೆದು ಹಾಕುವ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಜಾಗೃತಿ ವಹಿಸಿ, ಅರ್ಹ ಯಾವುದೇ ಮತದಾರರು ಮತದಾನದಿಂದ ವಂಚಿತರಾಗದAತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ, ಹೆಸರು ತೆಗೆದು ಹಾಕುವಿಕೆಯ ವಿವರಗಳನ್ನು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಪ್ಪದೇ ನೀಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತಂತೆ , ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದು, ಪರಿಷ್ಕೃತ ಪಟ್ಟಿಯ ವಿವರಗಳನ್ನು ನೀಡಲಾಗುವುದು ಎಂದರು.

 ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Karwar: Ritish Kumar Singh calls for transparent Electoral Roll revision process

Read These Next