ಕಾರವಾರ: ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

Source: SO NEWS | By S O News | Published on 27th October 2021, 10:38 PM | Coastal News |

ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ  ಅರ್ಜಿ ಸಲ್ಲಿಸುವ  ಅವಧಿಯನ್ನು ನವೆಂಬರ್ 20ರ ವರೆಗೆ ವಿಸ್ತರಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಪ್ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪಿ.ಯು.ಸಿ, ಪದವಿ ಹಾಗೂ ಇತರೇ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ,  ಕಾರವಾರ, ಶಿರಸಿ, ಭಟ್ಕಳದಲ್ಲಿ 2021-22 ನೇ ಸಾಲಿಗೆ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
 
ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿ ಅಥವಾ ಆಯಾ  ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ  ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಮೀಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...