ಕಾರವಾರ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Source: varthabhavan | By Arshad Koppa | Published on 8th August 2017, 8:29 AM | Coastal News | Guest Editorial |

ಕಾರವಾರ ಆಗಸ್ಟ 7 : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಆಗಸ್ಟ 10 ಮತ್ತು 11 ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು 
ಆಗಸ್ಟ 10 ರಂದು ಬೆಳಗ್ಗೆ 9 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡುವರು. 10 ಗಂಟೆಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆಯ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಹಳಿಯಾಳ ಗುತ್ತಿಗೇರಿ ಗಲ್ಲಿಯಲ್ಲಿ ಶಾದಿ ಮಹಲ್ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮಂಗಳವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು, ಬಳಿಕ ಜನಸಂಪರ್ಕ ಸಭೆ ನಡೆಸುವರು. ಸಂಜೆ 6.30 ಗಂಟೆಗೆ ಹಳಿಯಾಳ ಪುರಸಭೆ ವತಿಯಿಂದ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಅಳವಡಿಸಲಾದ ಸಿ.ಸಿ.ಟಿ.ವಿ  ಹಾಗೂ ಹಳಿಯಾಳ ಪಟ್ಟಣದಲ್ಲೆಡೆ ಅಳವಡಿಸಲಾದ ಎಲ್.ಇ.ಡಿ ದೀಪಗಳ ಲೋಕಾರ್ಪಣೆ  ಕಾರ್ಯಕ್ರಮದಲ್ಲಿ ಭಾಗವಹಿಸುವರು. 
ಆ.11 ರಂದು ಬೆಳಗ್ಗೆ 10 ಗಂಟೆಗೆ ಜೋಯಿಡಾ ತಾಲೂಕಾ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಮದ್ಯಾಹ್ನ 3 ಗಂಟೆಗೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಡಾ.ರವಿಂದ್ರನಾಥ ಕಡಲ ತೀರಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಸಾಮಾನ್ಯ ಸಭೆ ಹಾಗೂ ವಾರ್ಷಿಕ ವರದಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. 

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ ಆಗಸ್ಟ 7 : 2017-18ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ  ಹೆಚ್.ಐ.ವಿ ಸೋಂಕಿತ ಸಂತ್ರಸ್ಥೆ ಮಹಿಳೆಯರಿಗೆ ಸ್ವಯಂ-ಉದ್ಯೋಗ ಕೈಗೊಳ್ಳಲು  ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ
 ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರವಾರ ಇವರನ್ನು ಸಂಪರ್ಕಿಸಿ  ಅರ್ಜಿಯನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಸೂಕ್ತ ಅಡಕಗಳೊಂದಿಗೆ ಆಯಾ ತಾಲೂಕಿನ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...