ಕಾರವಾರ: ನೆಹರು ಯುವ ಕೇಂದ್ರ ವತಿಯಿಂದ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆ

Source: SO NEWS | By S O News | Published on 27th October 2021, 7:24 PM | Coastal News |

ಕಾರವಾರ: ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಸಹಕಾರದ ಮೆರೆಗೆ ನೆಹರು ಯುವ ಕೇಂದ್ರ ವತಿಯಿಂದ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಜಿಲ್ಲೆಯಲ್ಲಿ 2 ವಿಭಾಗದಲ್ಲಿ ತಾಲೂಕಾ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಿಗೆ ಪ್ರಥಮ 5, ದ್ವಿತೀಯ 2, ತೃತೀಯ 1 ಸಾವಿರದಂತೆ ಬಹುಮಾನ ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಪ್ರಥಮ 25, ದ್ವಿತೀಯ 10, ತೃತೀಯ 5 ಸಾವಿರ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಥಮ 2 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 50 ಸಾವಿರ ರೂ.  ಬಹುಮಾನ ನೀಡಲಾಗುವುದು.

Patriotism and Nation Building (ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ) ವಿಷಯದ ಕುರಿತಾಗಿ 9-10 ನಿಮಿಷ ಮೀರದಂತೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ  ಮಾತನಾಡಬೇಕು. 18-29 ವಯೋಮಿತಿಯ ಒಳಗಿನ  ಉತ್ತರ ಕನ್ನಡ ಜಿಲ್ಲೆಯ ನಿವಾಸಿಗಳಾಗಿರಬೇಕು. ಆಯಾ ತಾಲೂಕಿನ ಆಸಕ್ತರು ಯಾವುದೇ ವರ್ಗದ, ವಿದ್ಯಾರ್ಥಿಗಳು ಅಥವಾ ಉದ್ಯೋಗದಲ್ಲಿರುವವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಆಧಾರ್ ಕಾರ್ಡ್ (ಕಡ್ಡಾಯ), ಪ್ಯಾನ್ ಕಾರ್ಡ್ \ ಶಾಲಾ ಕಾಲೇಜಿನಿಂದ \ಆಫೀಸ್ ಸಂಸ್ಥೆಗಳಿಂದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು ವಯೋಮಿತಿಯ ತಪಾಸಣೆಗಾಗಿ ಅಗತ್ಯವಾಗಿ ತರಲು ನಿರ್ದೇಶಿಸಲಾಗಿದೆ.

ಪಿಯು, ಪ್ರಥಮ ದರ್ಜೆ ಕಾಲೇಜು ಅಥವಾ ವಿದ್ಯಾ ಸಂಸ್ಥೆಗಳು ಮೊದಲು ತಮ್ಮ ಕಾಲೇಜುಗಳಲ್ಲಿ  ಭಾಷಣ ಸ್ಪರ್ಧೆ ನಡೆಸಿ ವಿಜೇತ ಮೊದಲ 3 ಅಭ್ಯರ್ಥಿಗಳನ್ನು ತಾಲೂಕು ಮಟ್ಟದ ಸ್ಪರ್ಧೆಗೆ ಕಳುಹಿಸಬಹುದು.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ತಾಲೂಕಿನವರಿಗೆ ಅ. 30 ರಂದು ಧಿವೇಕರ ಕಾಲೇಜು ಕಾರವಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹಾಗೂ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ತಾಲೂಕಿನ ಅಸಕ್ತರು ನವೆಂಬರ್ 2ರಂದು ಎಮ್‍ಇಎಸ್ ಕಾಲೇಜು, ಶಿರಸಿಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ನಂತರ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ ಕಾರವಾರ 08382- 226905, ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ 7503703457, ಮೀರಾ  ನಾಯ್ಕ್ 9449992195, ಅನಿಲ ರೇವಣಕರ 9008121235, ಪರಶುರಾಮ 8073475017 ಸಂಪರ್ಕಿಸಬಹುದೆಂದು ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...