ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ

Source: S O News | By I.G. Bhatkali | Published on 19th August 2023, 12:16 AM | Coastal News | Don't Miss |

ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ಆ.21 ರಿಂದ ಸೆ.02 ರ ವರೆಗೆ ನಡೆಯಲಿದ್ದು, ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಸಲಾಗಿದೆ.

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರಾದ ಎಚ್. ರಾಮನಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...