ಕಾರವಾರ: ಧಾರ್ಮಿಕ ಆಚರಣೆ, ಸಮಾರಂಭಗಳಿಗೆ ಜಿಲ್ಲಾಧಿಕಾರಿ ನಿಷೇಧ

Source: S O News service | By I.G. Bhatkali | Published on 21st April 2021, 1:11 AM | Coastal News |

ಕಾರವಾರ: ಕೋವಿಡ್-19 ಸೋಂಕು ಉಲ್ಬಣವಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಧಾರ್ಮಿಕ ಜಾತ್ರೆ, ಸಮಾರಂಭಗಳು ನಡೆಯುತ್ತಿರುವುದು ಜಿಲ್ಲೆಯ ಎಲ್ಲ ತಹಶಿಲ್ದಾರ್‍ಗಳು ನೀಡಿರುವ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ನಿಗದಿಪಡಿಸಿದ ಜಾತ್ರೆ, ಉತ್ಸವಗಳನ್ನು ಹಾಗೂ ಮುಂದಿನ ದಿನಗಳಲ್ಲಿ ನಿಗದಿಪಡಿಸಲು ಸಾಧ್ಯವಿರುವ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ಸರಕಾರದ ಆದೇಶದಂತೆ ನಿಷೇಧಿಸಿ, ಕೋವಿಡ್ ಸೋಂಕು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ಒಂದು ವೇಳೆ ಯಾವುದೇ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗಳು, ಸಭೆ, ಸಮಾರಂಭಗಳು ನಡೆದಿರುವುದು ಕಂಡುಬಂದಲ್ಲಿ ಆಯಾ ತಹಶಿಲ್ದಾರ್‍ರನ್ನೇ ನೇರ ಹೋಣೆಗಾರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...