ಕಾರವಾರ: ಸ್ವಚ್ಛ ಸಂಕಲ್ಪ ಸ್ವಚ್ಛ ಸಿದ್ಧಿ ಕುರಿತು ಸ್ಪರ್ಧೆಗಳು: ಸಿಇಒ ಚಂದ್ರಶೇಖರ್ ನಾಯಕ

Source: varthabhavan | By Arshad Koppa | Published on 31st August 2017, 7:57 AM | National News | Public Voice |

ಕಾರವಾರ ಆಗಸ್ಟ್ 30: ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮದಡಿ ಉತ್ತರ ಕನ್ನಡ ಜಿಲ್ಲಾದ್ಯಂತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ ನಾಯಕ ತಿಳಿಸಿದ್ದಾರೆ.
    ರಾಷ್ಟ್ರದಲ್ಲಿ ನೈರ್ಮಲ್ಯ ಮತ್ತು ಜನಾರೋಗ್ಯ ಕ್ಷೇತ್ರದಲ್ಲಿ ರಾಷ್ಟ್ರವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳಿಗೆ ಸಾರ್ವಜನಿಕರಿಂದ ಸಲಹೆ, ಮಾರ್ಗದರ್ಶನ ಹಾಗೂ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರಬಂಧ ಸ್ಪರ್ಧೆ, ಕಿರುಚಿತ್ರ ಸ್ಪರ್ಧೆ ಹಾಗೂ ಬಣ್ಣದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಮೂರು ಹಂತಗಳಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
    2017 ಸೆಪ್ಟೆಂಬರ್ 3 ಮತ್ತು 4ರಂದು `ಸ್ವಚ್ಛ ಭಾರತಕ್ಕೆ ನಾನು ಏನು ಮಾಡಬೇಕು’ ಎಂಬ ಶೀರ್ಷಿಕೆಯಡಿ ಎಲ್ಲ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು. ಈ ಎಲ್ಲ ಪ್ರಬಂಧಗಳನ್ನು ಸೆಪ್ಟೆಂಬರ್ 5ರಂದು ಕೇಂದ್ರ ಸರ್ಕಾರದ www.mygov.in ವೆಬ್‍ಸೈಟ್‍ನಲ್ಲಿ ಇಂದೀಕರಿಸಲಾಗುವುದು. ಪ್ರಬಂಧವು ಗರಿಷ್ಠ 250 ಪದಗಳನ್ನು ಮೀರಿರಬಾರದು ಎಂದರು.
`ಸ್ವಚ್ಛ ಭಾರತ ನನ್ನ ಕನಸು’ ಶೀರ್ಷಿಕೆಯಡಿ ಸೆಪ್ಟೆಂಬರ್ 5 ಮತ್ತು 6ರಂದು ಎಲ್ಲಾ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬಣ್ಣದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಇದರಲ್ಲಿ 1ರಿಂದ 5ನೇ ತರಗತಿ ಮಕ್ಕಳು ಭಾಗವಹಿಸಲಿದ್ದು, ಸಂಬಂಧಿಸಿದ ಶಾಲಾ ಮುಖ್ಯೋಪಧ್ಯಾಯರು ಬಣ್ಣದ ಚಿತ್ರಗಳನ್ನು ಹಾಗೂ ಪ್ರಬಂಧಗಳನ್ನು ಶೇಖರಿಸಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.
    ಅಂತೆಯೇ, `ಭಾರತದ ಸ್ವಚ್ಛತೆಗೆ ನನ್ನ ಕೊಡುಗೆ’ ಶೀರ್ಷಿಕೆಯಡಿ ಸೆಪ್ಟೆಂಬರ್ 5ರೊಳಗೆ ಪ್ರತಿ ಗ್ರಾಮ ಪಂಚಾಯ್ತಿಯಿಂದ ಕಿರುಚಿತ್ರಗಳ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಪ್ರತಿ ಕಿರುಚಿತ್ರದ ಗರಿಷ್ಠ    ಅವಧಿ 2ರಿಂದ 3 ನಿಮಿಷ ಮೀರಿರಬಾರದು. ಇದರಲ್ಲಿ ಕನಿಷ್ಠ ಒಂದು ಪ್ರಬಂಧ ಹಾಗೂ ವಿಡಿಯೋ ಕಿರುಚಿತ್ರವನ್ನು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕು ಪಂಚಾಯ್ತಿಗೆ ಸಲ್ಲಿಸಬೇಕು. ಸೆ.7ರೊಳಗೆ ಎಲ್ಲ ವಿಡಿಯೋಗಳನ್ನು ಕೇಂದ್ರ ಸರ್ಕಾರದ ವೆಬ್‍ಸೈಟ್ www.mygov.in ಇಲ್ಲಿ ಇಂಧೀಕರಿಸಲಾಗುವುದು.
    
ಈ ಎಲ್ಲ ಪ್ರಕ್ರಿಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಅಧ್ಯಾಪಕರು, ವೃತ್ತಿಪರರು, ಜನಪ್ರತಿನಿಧಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...