ಕಾರವಾರ: ಪ್ರತಿ ಜಿಲ್ಲೆಗೂ ಇಎಸ್‍ಐ ಆಸ್ಪತ್ರೆಗೆ ಶಿಫಾರಸು: ಎಂ.ಆರ್.ವೆಂಕಟೇಶ್

Source: varthabhavan | By Arshad Koppa | Published on 19th September 2017, 8:38 AM | Coastal News | Special Report |

ಕಾರವಾರ ಸೆ.18 (ಕರ್ನಾಟಕ ವಾರ್ತೆ): ಇಎಸ್‍ಐ ಭತ್ಯೆ ಪಾವತಿಸುವ ಎಲ್ಲ ಕಾರ್ಮಿಕರ ಆರೋಗ್ಯ ಭದ್ರತೆ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಇಎಸ್‍ಐ ಆಸ್ಪತ್ರೆ ಆರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಹೇಳಿದ್ದಾರೆ.
    ಸಫಾಯಿ ಕರ್ಮಚಾರಿಗಳ ಹಾಗೂ ಸ್ವಚ್ಚತಾ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಸೋಮವಾರ ಜಿಲ್ಲಾ ಪಂಚಾಯ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ಇಎಸ್‍ಐ ಸೌಲಭ್ಯ ಇರುವುದೇ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ. ಆದರೆ ಜಿಲ್ಲೆಯಲ್ಲಿ ಇಎಸ್‍ಐ ಆಸ್ಪತ್ರೆಯೇ ಇಲ್ಲದೆ ಕಾರ್ಮಿಕರಿಂದ ಭತ್ಯೆ ಕಡಿತಗೊಳಿಸುವುದು ಸರಿಯಾದ ಕ್ರಮವಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೂ ಇಎಸ್‍ಐ ಆಸ್ಪತ್ರೆ ಆರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಆಯೋಗದಿಂದ ಶಿಫಾರಸು ಮಾಡುವುದಾಗಿ ಅವರು ತಿಳಿಸಿದರು.
    ರಾಜ್ಯಾದ್ಯಂತ ಈವರೆಗ 24 ಜಿಲ್ಲೆಗಳಲ್ಲಿ ತಮ್ಮ ನೇತೃತ್ವದ ಆಯೋಗದ ತಂಡ     ಭೇಟಿ ನೀಡಿ ಸಫಾಯಿ ಕರ್ಮಚಾರಿಗಳ ಯೋಗ ಕ್ಷೇಮ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಧಾರಣೆಯಾಗಿದ್ದು ವಿವಿಧ ಇಲಾಖೆಗಳಿಂದ ಕೈಗೊಂಡ ಕಾರ್ಯಕ್ರಮಗಳು ತೃಪ್ತಿದಾಯವಾಗಿವೆ ಎಂದರು.
    ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಹಾಗೂ ಸ್ವಚ್ಚತಾ ಕಾರ್ಮಿಕರ ಬದುಕು ಸುಧಾರಿಸುವ ಸಲುವಾಗಿ 2013ರಲ್ಲಿ ಆಯೋಗ ರಚನೆಯಾಗಿದ್ದು ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಪ್ರತ್ಯೇಕವಾಗಿ ಸಫಾಯಿ ಕರ್ಮಚಾರಿಗಳ ನಿಗಮವನ್ನು ಸ್ಥಾಪಿಸಿ 100 ಕೋಟಿ ರೂ. ಅನುದಾನವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಫಾಯಿ ಕರ್ಮಚಾರಿಗಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಎಲ್ಲ ಪ್ರಯತ್ನಗಳನ್ನು ಮಾಡಿದೆ ಎಂದರು.


    ಸಫಾಯಿ ಕರ್ಮಚಾರಿಗಳಿಗಾಗಿ ಗೃಹ ಭಾಗ್ಯ ಯೋಜನೆಯಲ್ಲಿ ಮನೆಗಳ ನಿರ್ಮಾಣ, ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ವ್ಯವಸ್ಥೆ, ಅವರ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವ ಯೋಜನೆ, ಅಲ್ಲದೆ ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೆ ಅವರ ಮಕ್ಕಳಿಗೆ ನೇರ ದಾಖಲಾತಿ, ಆರೋಗ್ಯ ಭದ್ರತೆಯ ಜ್ಯೋತಿ ಸಂಜೀವಿನಿ, ಕಾಲ ಕಾಲಕ್ಕೆ ಆರೋಗ್ಯ ಶಿಬಿರಗಳು ಹಾಗೂ ಸ್ವಚ್ಚತಾ ಸಲಕರಣೆಗಳ ವಿತರಣೆ, ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
    ನಗರಸಭೆ, ಪುರಸಭೆಗಳಲ್ಲಿ ಪೌರ ಕಾರ್ಮಿಕರ ಹಿತದೃಷ್ಟಿಯಿಂದ ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೂಲಕಂಶವಾಗಿ ಪ್ರಗತಿ ಪರಿಶೀಲನೆ ನಡೆಸಿದರು.
    ಆಯೋಗದ ಸದಸ್ಯ ಗೋಕುಲ್ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ ನಾಯಕ್, ಆಯೋಗದ ಸಂಶೋಧನಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...