ಕಾರವಾರ: ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ

Source: S O News service | By I.G. Bhatkali | Published on 9th November 2019, 2:27 PM | Coastal News |

ಕಾರವಾರ:  ಸರ್ವೋಚ್ಚ ನ್ಯಾಯಾಲಯದ ಅಯೋಧ್ಯೇಯ ತೀರ್ಪಿನ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಯಿಂದ ಈಗಾಗಲೇ ಪಟಾಕಿ, ಸಿಡಿಮದ್ದುಗಳ ಬಳಕೆ, ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಮುಂದಿನ 15 ದಿನಗಳವರೆಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಸೂಚಿಸಿದರು. 
     
ಅಯೋಧ್ಯೇಯ ತೀರ್ಪಿನ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ಎ.ಸಿ. ತಹಶೀಲ್ದಾರ ಹಾಗೂ  ಇ.ಓ ಗಳೊಂದಿಗೆ ವಿಡಿಯೋ ಸಂವಾದ ನಡೆಸಿ,  ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕಾರ್ಯವನ್ನು ಕೇವಲ ಎರಡು ದಿನಗಳಿಗೆ ಸೀತಗೊಳಿಸಧೇ, ಮುಂದಿನ 15 ದಿನಗಳವರೆಗೂ ಕೂಡ ಗಮನದಲ್ಲಿಟ್ಟುಕೊಂಡು ನಿರ್ವಹಿಸಬೇಕೇಂದು ಹೇಳಿದರು. 

ಜಿಲ್ಲೆಯ ಕೋಮು ಸೌಹಾರ್ಧತೆ ತೋರಿಸಲು ಇದೊಂದು ಒಳ್ಳೆಯ ಅವಕಾಶವಾಗಿದ್ದು, ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಧಾರ್ಮಿಕ ಕಾರ್ಯ ಮತ್ತು ಹಬ್ಬಗಳನ್ನು ಆಚರಿಸುವಂತೆ ತಿಳಿಸತಕ್ಕದ್ದು ಎಂದು ವಿವರಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ಮಾತನಾಡಿ ಪಟಾಕಿ ಮತ್ತು ಮದ್ಯ ಅಲ್ಲದೇ ಡಿಜೆಯಂತವಗಳನ್ನೂ  ಕೂಡ ಸಂಪೂರ್ಣವಾಗಿ ಮತ್ತು ಕಡ್ಡಾಯವಾಗಿ ಬಂದ ಮಾಡಬೇಕು. ಮುಂದಿನ 15 ದಿನಗಳವರೆಗೆ ಯಾರೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಲ್ಲಿ ಮುಂಚಿತವಾಗಿ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾವಹಿಸಿದ್ದು,

ಆಕ್ಷೇಪಾರ್ಹ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಲ್ಲಿ ಅಂತಹವರನ್ನು ವಾರಂಟ್ ಇಲ್ಲದೇ ಬಂದನಕ್ಕೆ ಒಳಪಡಿಸಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಕಾರವಾರ ಉಪವಿಭಾಗಾಧಿಕಾರಿ ಪ್ರಿಯಾಂಗಾ ಎಮ್ ಹಾಗೂ  ಪೌರಾಯುಕ್ತ ಎಸ್ ಯೋಗೇಶ್ವರ ಅವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...