ಕಾರವಾರ: ಜೆಜೆಎಂ ಅನುಷ್ಠಾನಕ್ಕಿರುವ ತೊಂದರೆಗಳ ನಿವಾರಣೆಗೆ ತರಬೇತಿ ಕಾರ್ಯಗಾರಗಳು ಅತ್ಯಾವಶ್ಯಕ; ಸಿಇಒ

Source: S O News service | By I.G. Bhatkali | Published on 26th August 2021, 7:51 PM | Coastal News |

ಕಾರವಾರ: ಗ್ರಾಮೀಣ ಭಾಗದ ಜನರ ನೀರಿನ ಬವಣೆ ನೀಗಿಸುವ ಉದ್ದೇಶದಿಂದ ಕೇಂದ್ರ, ರಾಜ್ಯ ಸರಕಾರ ಜಾರಿಗೊಳಿಸಿರುವ ಜಲ ಜೀವನ ಮಿಷನ್ ಯೋಜನೆಯು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಾಥಮಿಕ ಹಂತದ ಪ್ರಮುಖ ಯೋಜನೆಯಾಗಿದ್ದು, ಯೋಜನೆಯ ಅನುಷ್ಠಾನಕ್ಕಿರುವ ತೊಂದರೆಗಳ ನಿವಾರಣೆಗೆ ಇಂತಹ ತರಬೇತಿ ಕಾರ್ಯಗಾರಗಳು ಅತ್ಯಾವಶ್ಯಕವಾಗಿವೆ  ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಸ್ವಚ್ಛ ಭಾರತ ಅಭಿಯಾನ, ಗ್ರಾಮೀಣ ಮತ್ತು ಸ್ಕೊಡ್‍ವೆಸ್ ಸಂಸ್ಥೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಲ ಜೀವನ್ ಮಿಷನ್ ಯೋಜನೆ ಅನುμÁ್ಠನ ಕಾರ್ಯಕ್ರಮದಡಿ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅನುμÁ್ಠನ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ವರ್ಷ ಪರಸ್ಪರ ಸಂವಹನದ ಕೊರತೆಯಿಂದ ಯೋಜನೆಯ ಅನುμÁ್ಠನದ ಬಗ್ಗೆ ಹಲವು ಗೊಂದಲಗಳಿದ್ದವು. ಆ ಎಲ್ಲ ಗೊಂದಲಗಳ ನಿವಾರಣೆಗಾಗಿ ಈ ಕಾರ್ಯಗಾರ ಆಯೋಜಿಸಲಾಗಿದ್ದು, ಉತ್ತಮ ಸಲಹೆ, ಸೂಚನೆ ಜೊತೆಗೆ ಯೋಜನೆಯ ಅನುಷ್ಠಾನಕ್ಕೆ ಅಡ್ಡಿಯಾಗುವ ಸಮಸ್ಯೆಗಳ ನಿವಾರಣೆಗೆ ಪರಿಣಿತ ಸಂಪನ್ಮೂಲ ವ್ಯಕ್ತಿಗಳು ತಿಳಿಸುತ್ತಾರೆ. ಎಲ್ಲ ತಾಲೂಕು ಪಂಚಾಯತ್‍ನ ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜೆಜೆಎಂಅನುಷ್ಠಾನಕ್ಕಿರುವ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಜೆಜೆಎಂ ಅನುಷ್ಠಾನದಲ್ಲಿ ಸರ್ಕಾರಗಳು, ಗ್ರಾಮ ಪಂಚಾಯತಿಗಳು ಹಾಗೂ ಸಾರ್ವಜನಿಕರೂ ಪಾಲೂದಾರರಾಗಿದ್ದು, ಪ್ರತಿಯೊಬ್ಬರೂ ಯೋಜನೆಯ ಮಹತ್ವ ಅರಿತುಕೊಳ್ಳಬೇಕಿದೆ. ಜಿಲ್ಲೆಯ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರಕಾರ ಈ ಯೋಜನೆಯಲ್ಲಿ ಅತೀ ಹೆಚ್ಚಿನ ಅನುದಾನ ನೀಡಿದೆ. ಪ್ರತಿಯೊಬ್ಬರೂ ನಳದ ಸಂಪರ್ಕ ಹೊಂದುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಕೇಂದ್ರ, ರಾಜ್ಯ ಸರಕಾರ ಜೆಜೆಎಂನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಪ್ರತೀ ವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ನಿರ್ದೇಶನ ನೀಡುತ್ತಿದ್ದಾರೆ. ಆದ್ದರಿಂದ ಅನುಷ್ಠಾನಾಧಿಕಾರಿಗಳು ಯಾವುದೇ ವಿಳಂಬ ಮಾಡದೇ ತಕ್ಷಣ ಕಾರ್ಯ ಪ್ರವೃತ್ತರಾಗಿ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು.

ನಂತರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಐಎಸ್‍ಎ ನಿರ್ದೇಶಕ ಪರಮೇಶ್ವರ ಹೆಗಡೆ ಅವರು ಜೆಜೆಎಂ ಯೋಜನೆ ಅನುಷ್ಠಾನದ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು, ಸ್ಕೊಡ್‍ವೆಸ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ್ ನಾಯ್ಕ್,  ಜೆಜೆಎಂ ನ ಜಿಲ್ಲಾ ವ್ಯವಸ್ಥಾಪಕ ವೆಂಕಟೇಶ್ ನಾಯಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...