ಕಾರವಾರ: ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

Source: SO NEWS | By S O News | Published on 27th October 2021, 7:12 PM | Coastal News |

ಕಾರವಾರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ರಾಜ್ಯ ಸರ್ಕಾರ ನಡೆಸಲಿರುವ ‘ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ’ಗೆ 45 ದಿನಗಳ ವಿಶೇಷ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿರುತ್ತದೆ. 

ಆಸಕ್ತರು ನ. 6 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. 

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ  0821-2515944ಲ್ಲಿ  ಸಂಪರ್ಕಿಸಬಹುದಾಗಿದೆ
ಎಂದು  ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...