ಕಾರವಾರ: ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

Source: S O News service | By I.G. Bhatkali | Published on 20th September 2021, 8:53 PM | Coastal News |

ಕಾರವಾರ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ವ್ಯಕಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  

ಜಿಲ್ಲೆಯಲ್ಲಿರುವ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳು  2021 ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ 11 ಕೊನೆಯ ದಿನವಾಗಿರುತ್ತದೆ. 
ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25000 ರೂಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1.00 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು  ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತಿದೆ. 
 
ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರವಾರ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಕಾರವಾರ ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕಾರವಾರ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...