ಕಾರವಾರ: ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

Source: S O News service | By I.G. Bhatkali | Published on 20th September 2021, 8:48 PM | Coastal News |

ಕಾರವಾರ: 2021-22 ನೇ ಸಾಲಿನ  ಪ್ರಥಮ ಸೆಮಿಸ್ಟರ್ ಮತ್ತು ತೃತೀಯ ಸೆಮಿಸ್ಟರ್ (ಲ್ಯಾಟರಲ್ ಎಂಟ್ರಿ )   ಡಿಪ್ಲೋಮಾ ಪ್ರವೇಶ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ.
ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್, ಅಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಕಮರ್ಷಿಯಲ್ ಪ್ರಾಕ್ಟೀಸ್ (ನಾನ್ ಇಂಜಿನಿಯರಿಂಗ್) ಕೋರ್ಸುಗಳಿಗೆ ಸೀಟುಗಳು ಲಭ್ಯವಿರುತ್ತವೆ. 

ಅರ್ಹ ವಿದ್ಯಾರ್ಥಿಗಳು ನಿಗದಿತ ಶುಲ್ಕದೊಂದಿಗೆ  ಸಂಬಂಧಿಸಿದ ಪ್ರಮಾಣ ಪತ್ರವನ್ನು ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಸಂದರ್ಶನ ಅಥವಾ ಕೌನ್ಸಿಲಿಂಗ್ ಇರುವುದಿಲ್ಲ ನೇರವಾಗಿ ಪ್ರವೇಶವನ್ನು ನೀಡಲಾಗುವುದು. 

ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ನೋಡುವುದು ಅಥವಾ  ಸಂಸ್ಥೆಯ ಪ್ರಿನ್ಸಿಪಾಲರ ದೂರವಾಣಿ ಸಂಖ್ಯೆ : 9448995682 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರ

ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2021-22 ನೇ ಸಾಲಿನ ಕ್ರಿಯಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ...

ದಸರಾ ರಜೆಗೆ ಮುರುಡೇಶ್ವರವನ್ನು ತುಂಬಿಕೊಂಡ ಪ್ರವಾಸಿಗರು; ಕಡಲತಡಿಯಲ್ಲಿ ಜನವೋ ಜನ; ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಸಾಹಸ

ಸರಣಿ ರಜೆಯಿಂದಾಗಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಿಗರಿಂದ ತುಂಬಿ ಹೋಗಿದೆ. ಕಡಲ ತಡಿಯಲ್ಲಿ ಕಣ್ಣು ...