ಕಾರವಾರ: ಮಹಿಳೆಯರಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Source: S O News | By I.G. Bhatkali | Published on 25th November 2023, 4:57 PM | Coastal News | Don't Miss |

ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಮಹಿಳೆಯರಿಗಾಗಿ ಡಿಸೆಂಬರ್ ತಿಂಗಳಲ್ಲಿ “ಬ್ಯೂಟಿ ಪಾರ್ಲರ್ ತರಬೇತಿ ಮತ್ತು ವಸ್ತç ವಿನ್ಯಾಸ (ಹೊಲಿಗೆ)” ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಹಾಗೂ ಕನಿಷ್ಟ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವನ್ನು ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ನೇರವಾಗಿ, ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು ಹಾಗೂ ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449860007, 9538281989, 9916783825, 8880444612, 9620962004, ಕ್ಕೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...