ಕಾರವಾರ: ಜಿಲ್ಲೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸಲು ವಿನೂತನ ಕಾರ್ಯಕ್ರಮ ; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕಾರ

Source: S O News | By Laxmi Tanaya | Published on 27th November 2023, 10:04 PM | Coastal News |

ಕಾರವಾರ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ನಿಟ್ಟಿನಲ್ಲಿ ಜಿಲ್ಲಾಡಳಿತದ ಮೂಲಕ ಅಗತ್ಯವಿರುವ ಎಲ್ಲಾ ರೀತೀಯ ಸಹಕಾರ ನೀಡಲಾಗುವುದು ಎಂದರು

ಕಾರವಾರ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ವಸ್ತು ಪ್ರದರ್ಶನ ಮಾರಾಟ ಮಳಿಗೆ ಮತ್ತು ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಅನುಮತಿ ಪಡೆಯುವವರು ಜಿಲ್ಲಾಡಳಿತ ರೂಪಿಸಿರುವ ನಿಬಂಧನೆಗಳಿಗೆ ಬದ್ಧರಾಗಿರಬೇಕು ಹಾಗೂ ವಸ್ತು ಪ್ರದರ್ಶನ ಮಳಿಗೆ ಮತ್ತು ಕಾರ್ಯಕ್ರಮ ನಡೆಸಲು ಸಿಂಗಲ್ ವಿಂಡೋ ಮೂಲಕ ಅನುಮತಿ ನೀಡಲಾಗುವುದು ಎಂದರು.

ಪ್ರವಾಸೋದ್ಯಮ ಸ್ಥಳಗಳ ಬಾಡಿಗೆ ಪಡೆದ ಟೆಂಡರ್‌ದಾರರಿAದ ಬರಬೇಕಾದ ಬಾಡಿಗೆಗೆ ಸಂಬAಧಿಸಿದAತೆ ಟೆಂಡರ್‌ದಾರರಿಗೆ ನೋಟಿಸ್ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ಶಾಸಕ ಸತೀಶ್ ಸೈಲ್ ಮಾತನಾಡಿ ವಸ್ತು ಪ್ರದರ್ಶನ ಮಾರಾಟ ಮಳಿಗೆ ಮತ್ತು ಕಾರ್ಯಕ್ರಮ ನಡೆಸಲು ಡಿಸೆಂಬರ್ ನಿಂದ ಮೇ ವರಿಗೆ ಮಾತ್ರ ಅವಕಾಶವಿದ್ದು, ಮಾರಾಟ ಮಳಿಗೆ ಸ್ಥಳದಲ್ಲಿನ ಸ್ವಚ್ಚತೆಗೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಪ್ರತ್ಯೇಕ ದರ ನಿಗದಿಪಡಿಸುಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾತನಾಡಿ ವಸ್ತು ಪ್ರದರ್ಶನ ಮಾರಾಟ ಮಳಿಗೆ ಮತ್ತು ಕಾರ್ಯಕ್ರಮ ನಡೆಸುವವರು ಧ್ವನಿವರ್ಧಕ ಬಳಸಲು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸುವಂತೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಬೇಬಿ ಮೊಗೇರ, ತಹಶೀಲ್ದಾರ ನಿಶ್ಚಲ್ ನರೋನಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇತರರು ಇದ್ದರು

Read These Next

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...