ಕಾರವಾರ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ: ಅರ್ಜಿ ಆಹ್ವಾನ

Source: S O News | By I.G. Bhatkali | Published on 6th November 2023, 8:59 PM | Coastal News | Don't Miss |

ಕಾರವಾರ: ಕ್ರೀಡೆಯಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಮೇಜರ್ ಧ್ಯಾನಚಂದ್ ಖೇಲ್ ರತ್ನ (MDKR) ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ,  ಧ್ಯಾನಚಂದ್ ಜೀವಮಾನ ಪ್ರಶಸ್ತಿ, ರಾಷ್ಟ್ರೀಯ ಖೇಲ್ ಪ್ರೋತ್ಸಾಹ  ಪುರಸ್ಕಾರ (MDKR) ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ (MAKA) ಟ್ರೋಫಿಗಳನ್ನು ಕ್ರೀಡಾ ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರೀಡಾಪಟುಗಳು, ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳಿಗೆ ನೀಡಲಾಗುತ್ತಿದೆ.

ಅರ್ಹ ಕ್ರೀಡಾಪಟುಗಳಿಂದ 2023 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗಾಗಿ ಸಚಿವಾಲಯವು ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 04 ಅಕ್ಟೋಬರ್ 2023 ರಂದು ಮೀಸಲಾದ ಆನ್‍ಲೈನ್ ಪೋರ್ಟಲ್ dbtyas-sports.gov.in ನಲ್ಲಿ ತರಬೇತುದಾರರು ಮತ್ತು ಘಟಕಗಳು ಮತ್ತು ವಿಶ್ವವಿದ್ಯಾನಿಲಯಗಳು ಪ್ರಶಸ್ತಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ಅರ್ಹರಾಗಿರುವ ಕ್ರೀಡಾಪಟುಗಳು, ತರಬೇತುದಾರರು ಮತ್ತು ಘಟಕಗಳು ಅಧಿಕಾರಿಗಳ ಶಿಫಾರಸ್ಸುಗಳಿಲ್ಲದೇ ಸ್ವಯಂ-ಅರ್ಜಿ ಸಲ್ಲಿಸಲು ಅನುಮತಿಸಲಾಗಿದ್ದು, ಆನ್‍ಲೈನ್ ಪೋರ್ಟಲ್ dbtyas-sports.gov.in ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ನವೆಂಬರ್ 2023 ಆಗಿರುತ್ತದೆ. ಆನ್‍ಲೈನ್ ಅರ್ಜಿಯೊಂದಿಗೆ ಉದ್ಯೋಗದಾತರಿಂದ ವಿಜಿಲೆನ್ಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು (ಕೇಂದ್ರ/ರಾಜ್ಯ ಸರ್ಕಾರದ PSU ಸಂಸ್ಥೆಯ ಸಂದರ್ಭದಲ್ಲಿ) ಕಡ್ಡಾಯವಾಗಿದೆ. 

ಆನ್‍ಲೈನ್ ಅರ್ಜಿ ನಮೂನೆಯಲ್ಲಿ ಯವುದೇ ಸಮಸ್ಯೆಗಳು ಎದುರಾದರೆ, ಅರ್ಜಿದಾರರು ಕ್ರೀಡಾ ಇಲಾಖೆಯ [email protected] ಹಾಗೂ ದೂರವಾಣಿ ಸಂಖ್ಯೆ: 011-23387432 ಬೆಳಿಗ್ಗೆ 9 ರಿಂದ ಸಂಜೆ 5.30 ರವರೆಗೆ, ಅಲ್ಲದೇ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆಗಳು 1800-202-5155 ಮತ್ತು 1800-258-5155 ಕ್ಕೆ ಸಂಪರ್ಕಿಸಬಹುದಾಗಿರುತ್ತದೆ.     

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ: 9480886551 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
  

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...