ಕಾರವಾರ: ಜಿಲ್ಲಾಧಿಕಾರಿಯಿಂದ ಸಂವಿಧಾನ ಪ್ರಸ್ತಾವನೆ ಬೋಧನೆ

Source: S O News | By I.G. Bhatkali | Published on 27th November 2023, 9:09 PM | Coastal News |

ಕಾರವಾರ: ಸಂವಿಧಾನ ದಿನಾಚರಣೆ ಪ್ರಯುಕ್ತ ಇಂದು, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಿಧಾನ ಪ್ರಸ್ತಾವನೆ ಬೋಧಿಸಿದರು.

 ನಂತರ ಪ್ರಾಸ್ತವಿಕವಾಗಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು 1949 ರ ನವೆಂಬರ್ 26 ರಂದು ಸಂವಿಧಾನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ದಿನವನ್ನು ಅಚರಿಸಲು ಸರ್ಕಾರ ಅದೇಶಿಸಿದ್ದು, ಅದರಂತೆ ಎಲ್ಲರೂ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...